Saturday, April 19, 2025
Google search engine

Homeಅಪರಾಧನಟ ದರ್ಶನ್ ಗೆಳತಿ ಪವಿತ್ರಾಗೌಡ ಪೊಲೀಸ್ ವಶಕ್ಕೆ

ನಟ ದರ್ಶನ್ ಗೆಳತಿ ಪವಿತ್ರಾಗೌಡ ಪೊಲೀಸ್ ವಶಕ್ಕೆ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಬೆಳವಣಿಗೆ ನಡೆದಿದೆ. ಬೆಂಗಳೂರಿನಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್.ಆರ್.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ.

ಆಪ್ತೆ ಪವಿತ್ರಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರನ್ನು ಕೊಲೆ ಮಾಡಲು ಸುಪಾರಿ ನೀಡಿದ್ದರು ಎಂಬ ಕಾರಣಕ್ಕೆ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ವಿಜಯನಗರ ಎಸಿಪಿ ಚಂದನ್ ತಂಡ ಮೈಸೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಅರೆಸ್ಟ್ ಮಾಡಿದ್ದಾರೆ.

ಈ ಘಟನೆ ಬೆನ್ನಲ್ಲೇ ಬೆಂಗಳೂರಿನ ನಟ ದರ್ಶನ್ ಮನೆ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದರ್ಶನ್ ಮನೆ ಬಳಿ ಬ್ಯಾರಿಕೇಡ್ ಹಾಕಿ ೨೦ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular