Sunday, April 20, 2025
Google search engine

Homeರಾಜಕೀಯಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ: ಸಿಎಂ ಸೂಚನೆ

ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ: ಸಿಎಂ ಸೂಚನೆ

ಬೆಂಗಳೂರು: ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ  ಹಿರಿಯ ಅಧಿಕಾರಿಗಳ ಜೊತೆಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ವೇಳೆ ಈ ಎಚ್ಚರಿಕೆ ನೀಡಿದರು.

ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ.  ವರ್ಗಾವಣೆ ವೇಳೆ ನಿಮ್ಮ ಕಾರ್ಯಕ್ಷಮತೆಯೇ ಮಾನದಂಡ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ. ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ ಎಂದು ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತೆ ಸಿ.ಶಿಖಾ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular