ಚಾಮರಾಜನಗರ: ಚಾಮರಾಜನಗರ ಜಿಲ್ಲಾಧಿಕಾರಿ ಡಿಎಸ್ ರಮೇಶ್ ಹಾಗೂ ಅಪಾರ ಜಿಲ್ಲಾಧಿಕಾರಿ ಖಾತ್ಯಾಯಿನಿದೇವಿ ಅವರನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ನೀಡಿದೆ.
ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಿ.ಎಸ್.ರಮೇಶ್ ಅವರನ್ನು ತೋಟಗಾರಿಕೆ ಇಲಾಖೆ ನಿರ್ದೇಶಕರನ್ನಾಗಿ ನೇಮಕ ಮಾಡಿದ್ದು,ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಇನ್ನೂ ಯಾರನ್ನೂ ಸರ್ಕಾರ ನೇಮಕ ಮಾಡಿಲ್ಲ.
ಚಾಮರಾಜನಗರ ಅಪಾರ ಜಿಲ್ಲಾಧಿಕಾರಿ ಹಾಗೂ ಮಲೈಮಹದೇಶ್ಚರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿಯಾಗಿದ್ದ ಖಾತ್ಯಾಯಿನಿದೇವಿ ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದ್ದು ಇವರ ಜಾಗಕ್ಕೆ ಕೊಳ್ಳೇಗಾಲ ಉಪವಿಭಾಗಾಧಿಕಾರಿಯಾಗಿ ಬಡ್ತಿ ಹೊಂದಿದ್ದ ಗೀತಾ ಹುಡೇದಾ ಅವರನ್ನು ಚಾಮರಾಜನಗರ ಜಿಲ್ಲೆಯ ಅಪಾರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಚಾಮರಾಜನಗರ ಎಡಿಸಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಗೀತಾ ಹುಡೇದಾ ಅಧಿಕಾರ ಸ್ವೀಕರಿಸಿದ್ದಾರೆ