ಚಾಮರಾಜನಗರ : ಕೊಳ್ಳೇಗಾಲ ಅಧಿಕಾರಿಯಾಗಿದ್ದ ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಗೀತಾ ಹುಡೇದ ಅವರನ್ನು ಚಾಮರಾಜನಗರ ಜಿಲ್ಲೆಯ ಅಪಾರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.ಅಲ್ಲದೆ ಹನೂರು ತಾಲೂಕಿನ ಮಲೈಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಹೆಚ್ಚುವರಿ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ. ಚಾಮರಾಜನಗರ ಜಿಲ್ಲೆಯ ಅಪಾರ ಜಿಲ್ಲಾಧಿಕಾರಿಯಾಗಿದ್ದ ಖಾತ್ಯಾಯಿನಿದೇವಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರಿಗೆ ಇನ್ನು ಸ್ಥಳ ನಿಗದಿಯಾಗಿರುವುದಿಲ್ಲ.