ಬೆಂಗಳೂರು: ನಟ ದರ್ಶನ್ ಪದೇ ಪದೇ ಸುದ್ದಿಯಾಗುತ್ತಿದ್ದಾರೆ. ಅದೂ ವಿವಿಧ ಕ್ರೈಂಗಳಿಂದ ಆಗಿದೆ. ಈಗ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಈ ಪ್ರಕರಣದಲ್ಲಿ ಆರೋಪ ಸಾಭೀತಾದ್ರೆ ಕನ್ನಡ ಚಿತ್ರರಂಗದಿಂದ ನಟ ದರ್ಶನ್ ಬ್ಯಾನ್ ಆಗಲಿದ್ದಾರೆ ಎನ್ನಲಾಗುತ್ತಿದೆ.
ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತ ಅಸಭ್ಯ ಮೆಸೇಜ್ ಹಾಗೂ ಪೋಟೋಗಳನ್ನು ಕಳುಹಿಸುತ್ತಿದ್ದ ಎಂಬ ಕಾರಣಕ್ಕೆ ದರ್ಶನ್ ಅಂಡ್ ಗ್ಯಾಂಗ್ ಬರ್ಬರವಾಗಿ ರೇಣುಕಾಸ್ವಾಮಿ ಹತ್ಯೆಗೈದಿದ್ದಾರೆ. ಇದು ಕನ್ನಡ ಚಿತ್ರರಂಗಕ್ಕೆ ದೊಡ್ಡ ಶಾಕ್ ನೀಡಿದಂತೆ ಆಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ.೧ ಆರೋಪಿಯಾದ್ರೇ, ನಟ ದರ್ಶನ್ ಎ.೨ ಆರೋಪಿಯಾಗಿದ್ದಾರೆ. ಈಗ ೬ ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿರುವಂತ ನಟ ದರ್ಶನ್ ಅಂಡ್ ಟೀಂಗೆ ಆರೋಪ ಸಾಭೀತಾದ್ರೆ ಸಂಕಷ್ಟ ಎದುರಾಗಲಿದೆ ಎನ್ನಲಾಗುತ್ತಿದೆ. ಅದರಲ್ಲೂ ನಟ ದರ್ಶನ್ ಗೆ ದೊಡ್ಡ ಸಂಕಷ್ಟವೇ ಎದುರಾಗಲಿದೆ. ಕನ್ನಡ ಚಿತ್ರರಂಗದಿಂದ ನಟ ದರ್ಶನ್ ಬ್ಯಾನ್ ಮಾಡ್ತಾರಾ ಎಂಬ ಪ್ರಶ್ನೆ ಈಗ ಎದ್ದಿದೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಚಲನ ಚಿತ್ರ ವಾಣಿಜ್ಯ ಮಂಡಳಿ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ.