ಬೆಂಗಳೂರು: ಕೊಲೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ನಾಲ್ಕು ಬಾರ್ ಹೆಡೆಡ್ ಗೂಸ್ (ವಿಶಿಷ್ಟ ಪ್ರಭೇದದ ಬಾತುಕೋಳಿ)ಗಳನ್ನು ಸಾಕಿದ್ದ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದರ್ಶನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ದರ್ಶನ್, ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ.