Saturday, April 19, 2025
Google search engine

Homeರಾಜ್ಯದರ್ಶನ್‌ ಪ್ರಕರಣ:ನವರಸ ನಾಯಕ ಜಗ್ಗೇಶ್‌ ಮಾರ್ಮಿಕ ಟ್ವೀಟ್‌

ದರ್ಶನ್‌ ಪ್ರಕರಣ:ನವರಸ ನಾಯಕ ಜಗ್ಗೇಶ್‌ ಮಾರ್ಮಿಕ ಟ್ವೀಟ್‌

ಬೆಂಗಳೂರು: ಇನ್‌ಸ್ಟಗ್ರಾಮ್‌ನಲ್ಲಿ ತನ್ನ ಆಪ್ತ ಗೆಳತಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಎಂಬ ಕಾರಣಕ್ಕೆ ತಮ್ಮ ಅಭಿಮಾನಿ ರೇಣುಕಾಸ್ವಾಮಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪದಲ್ಲಿ ಚಿತ್ರನಟ ದರ್ಶನ್‌ ಬಗ್ಗೆ ನವರಸ ನಾಯಕ ಜಗ್ಗೇಶ್‌ ಮಾರ್ಮಿಕವಾಗಿ ಟ್ವೀಟ್‌ ಮಾಡಿದ್ದಾರೆ.

ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಘಟನೆ ಕುರಿತಂತೆ ಪೋಸ್ಟ್‌ ಮಾಡಿರುವ ಅವರು, ಮದಕ್ಕೆ ಕಾರುಣ್ಯದ ಅರಿವಿಲ್ಲ. ಅಂದರೆ ಮದ ಇದ್ದವನಿಗೆ ಕರುಣೆ ಎಂಬುದೇ ಇರುವುದಿಲ್ಲ ಎಂದು ಟ್ವೀಟ್‌ ಮಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿದೆ.

ಸರ್ವ ಆತಾನೇನ ಬ್ರಹ್ಮ ಎಂದು ಟ್ವೀಟ್‌ ಮಾಡಿ, ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಅವರು ದರ್ಶನ್‌ ಬಗ್ಗೆಯೇ ಟ್ವೀಟ್‌ ಮಾಡಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಸರ್ವ ಆತಾನೇನಬ್ರಹ್ಮ ಸರ್ವ ಜೀವಿಯಲ್ಲಿ ದೇವರಿದ್ದಾನೆ ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ! ಕರ್ಮ ಜೀವನ ಹಿಂದೆ ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ! ಕಲಿಯುಗದಲ್ಲಿ ದೇವರು ಕಲ್ಲಲ್ಲಾ ಎಲ್ಲಾ ಕರ್ಮಕ್ಕೂ ತತಕ್ಷಣ ಫಲಿತಾಂಶ ಉಂಟು! ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ ಎಂದು ಬರೆದಿದ್ದಾರೆ.

RELATED ARTICLES
- Advertisment -
Google search engine

Most Popular