ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ೧೩ ಮಂದಿಯನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದಂತ ೮ನೇ ಆರೋಪಿ ಡಿವೈಎಸ್ ಪಿ ಕಚೇರಿಯಲ್ಲಿ ಶರಣಾಗಿದ್ದಾನೆ.
ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕಿಡ್ನ್ಯಾಪ್ ಮಾಡಿಕೊಂಡು ಬಂದು, ಹಲ್ಲೆ ನಡೆಸಿ, ಹತ್ಯೆ ಮಾಡಿದ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಬಂಧಿಸಲ್ಪಟ್ಟಿದೆ. ಈ ಪ್ರಕರಣದಲ್ಲಿ ಕೇಸ್ ನ ೮ನೇ ಆರೋಪಿಯಾಗಿದ್ದಂತ ರವಿಶಂಕರ್, ಚಿತ್ರದುರ್ಗದ ಡಿವೈಎಸ್ಪಿ ಕಚೇರಿಯಲ್ಲಿ ಶರಣಾಗಿದ್ದಾನೆ. ಈತ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ೮ನೇ ಆರೋಪಿಯಾಗಿದ್ದನು.
ನಟ ದರ್ಶನ್ ಅಂಡ್ ಗ್ಯಾಂಗ್ ಬಂಧನದ ಬಳಿಕ, ರವಿಶಂಕರ್ ತಲೆಮರೆಸಿಕೊಂಡಿದ್ದನು. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಈತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಈಗ ೮ನೇ ಆರೋಪಿ ರವಿಶಂಕರ್ ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಗೆ ತೆರಳಿ ತಾನಾಗಿಯೇ ಪ್ರಕರಣದಲ್ಲಿ ಶರಣಾಗಿದ್ದಾರೆ.