ಚಿತ್ರದುರ್ಗ : ಚಿತ್ರದುರ್ಗ ನಗರಸಭೆ ಹಾಗೂ ಡಾನ್ ಬಾಸ್ಕೋ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗುರುವಾರ ವಿಶ್ವ ಪರಿಸರ ದಿನಾಚರಣೆ ಜಾಗೃತಿ ರ್‍ಯಾಲಿ ಹಾಗೂ ಐತಿಹಾಸಿಕ ಮಾರುಕಟ್ಟೆ ಕೆರೆ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು. ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಎಂ. ರೇಣುಕಾ ಹಾಗೂ ಪುರಸಭೆ ಸಿಬ್ಬಂದಿ, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.