ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಜೂ.೧೪ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೨ ನಡೆಯಲಿದ್ದು ಇದಕ್ಕಾಗಿ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಬಿಇಒ ಆರ್.ಕೃಷ್ಣಪ್ಪ ಹೇಳಿದರು.
ಪಟ್ಟಣದ ಸಂತ ಜೋಸೇಫರ ಶಾಲೆಯಲ್ಲಿ ತೆರೆದಿರುವ ಪರೀಕ್ಷಾ ಕೇಂದ್ರದಲ್ಲಿ ಕೊಠಡಿಗಳನ್ನು ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳಿಂದ ಒಟ್ಟು ೩೯೯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.
ಆ ಪೈಕಿ ೩೫೫ ಮಂದಿ ಪುನರಾವರ್ತಿತ, ೧೭ ಉನ್ನತೀಕರಣ ವಿದ್ಯಾರ್ಥಿಗಳು ಮತ್ತು ೨೭ ಮಂದಿ ಖಾಸಗಿ ಅಭ್ಯರ್ಥಿಗಳಾಗಿ ಪರೀಕ್ಷೆ ಎದುರಿಸಲಿದ್ದು ಎರಡೂ ತಾಲೂಕಿಗೆ ಒಂದೇ ಕೇಂದ್ರದಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.
ಜೂನ್.೧೪ರಂದು ಶುಕ್ರವಾರ ಪ್ರಥಮ ಭಾಷೆ ಕನ್ನಡ, ೧೫ರಂದು ತೃತೀಯ ಭಾಷೆ ಹಿಂದಿ, ೧೮ರಂದು ಗಣಿತ, ೨೦ರಂದು ವಿಜ್ಞಾನ, ೨೧ರಂದು ದ್ವಿತೀಯ ಭಾಷೆ ಇಂಗ್ಲೀಷ್, ೨೨ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯುತ್ತವೆಂದು ಮಾಹಿತಿ ನೀಡಿದರು.
ಆನಂತರ ಪರೀಕ್ಷೆ ಸಂಬoಧ ಶಾಲೆಯಲ್ಲಿ ಕೊಠಡಿ ಮೇಲ್ವಿಚಾರಕರ ಸಭೆ ನಡೆಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸುಸಜ್ಜಿತವಾಗಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಪರೀಕ್ಷಾ ಮುಖ್ಯ ಅಧೀಕ್ಷಕಿ ಅನುಸೂಯ, ಪ್ರಶ್ನೆ ಪತ್ರಿಕೆ ಅಭಿರಕ್ಷಕಿ ಲತಾ, ಇಸಿಒಗಳಾದ ಜಗದೀಶ್, ದಾಸಪ್ಪ ಸೇರಿದಂತೆ ಕೊಠಡಿಗಳ ಮೇಲ್ವಿಚಾರಕರು ಇದ್ದರು.