ಕೆ.ಆರ್.ನಗರ: ತಾಲೂಕಿನ ಗಂಧನಹಳ್ಳಿ ಗ್ರಾಮದಲ್ಲಿ ಹೆಚ್ಚುವರಿ ಮತ ಗಟ್ಟೆ ಕೇಂದ್ರ ತೆರೆಯಬೇಕು ಎಂದು ಒತ್ತಾಯಿಸಿ ತಾಲೂಕು ಕಛೇರಿಯಲ್ಲಿ ತಹಶೀಲ್ದಾರ್ ಸಂತೋಷ್‌ಕುಮಾರ್ ಅವರಿಗೆ ಎಂ.ಬಸವರಾಜು ಚಾರಿಟ್ರಬಲ್ ಟ್ರಸ್ಟ್ ಅಧ್ಯಕ್ಷ ಜಿ.ಎಸ್.ವೆಂಕಟೇಶ್ ನೇತೃತ್ವದಲ್ಲಿ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು.
ತಾಲೂಕಿನ ಗಂಧನಹಳ್ಳಿ ಗ್ರಾಮದಲ್ಲಿ ಐದು ಮತಗಟ್ಟೆಗಳಿದ್ದು ಪ್ರತಿ ಮತಗಟ್ಟೆಯಲ್ಲೂ ಒಂದು ಸಾವಿರಕ್ಕೂ ಹೆಚ್ಚು ಮತದಾರರಿದ್ದಾರೆ ಇದರಿಂದ ಪೂರ್ಣ ಪ್ರಮಾಣದಲ್ಲಿ ಮತದಾನ ಮಾಡಲು ಸಾಧ್ಯವಾಗುತ್ತಿಲ್ಲ, ಮುಂದೆ ನಡೆಯುವ ಲೋಕಸಭೆ ಮತ್ತು ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ವೇಳೆಗೆ ಮತ್ತಷ್ಟು ಮಂದಿ ಮತದಾರರು ಸೇರ್ಪಡೆ ಆಗಲಿದ್ದಾರೆ ಆದ್ದರಿಂದ ಹೆಚ್ಚುವರಿ ಮತಗಟ್ಟೆ ತೆರೆಯಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಜಿ.ಎಂ.ಹೇಮಂತ್, ವಸಂತಕುಮಾರ್, ಕೆಂಪರಾಜು, ಜಿ.ಎಸ್.ಮಂಜುನಾಥ್, ಉಮೇಶ್, ತ್ಯಾಗರಾಜು. ಲೋಕೇಶ್, ಯಶವಂತ್ ಮುಂತಾದವರು ಹಾಜರಿದ್ದರು.