Monday, April 21, 2025
Google search engine

Homeಸ್ಥಳೀಯಜೂನ್ 27 ರಂದು ಅರ್ಥಪೂರ್ಣವಾಗಿ ಶ್ರೀಕೆಂಪೇಗೌಡ ಜಯಂತಿ ಜಯಂತಿ ಆಚರಣೆ: ಡಾ ಪಿ. ಶಿವರಾಜು

ಜೂನ್ 27 ರಂದು ಅರ್ಥಪೂರ್ಣವಾಗಿ ಶ್ರೀಕೆಂಪೇಗೌಡ ಜಯಂತಿ ಜಯಂತಿ ಆಚರಣೆ: ಡಾ ಪಿ. ಶಿವರಾಜು

ಮೈಸೂರು: ಶ್ರೀ ಕೆಂಪೇಗೌಡರ ಜಯಂತಿಯನ್ನು ಜೂನ್ 27 ರಂದು ಬೆಳಗ್ಗೆ 11.30 ಗಂಟೆಗೆ ಕರ್ನಾಟಕ ಕಲಾ ಮಂದಿರದಲ್ಲಿ ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ.ಶಿವರಾಜು ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಶ್ರೀ ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೆಂಪೇಗೌಡ ಅವರಿಗೆ ಜಯಂತಿ ಆಚರಿಸುವುದರ ಮೂಲಕ ಅವರ ಕೊಡುಗೆ ಹಾಗೂ ಸಾಧನೆಗೆ ಬೆಲೆಕಟ್ಟಲು ಆಗುವುದಿಲ್ಲ.ಆದರೂ ಅವರ ಆದರ್ಶಗಳನ್ನು ಪಾಲಿಸಿ ಅದಕ್ಕೆ ಮೆರಗು ತರುವಂತೆ ಜಯಂತಿಯನ್ನು ಆಚರಿಸಲಾಗುವುದು ಎಂದು ಹೇಳಿದರು.

ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಸಂಬಂಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು. ಜಯಂತಿ ಕಾರ್ಯಕ್ರಮ ನಡೆಯುವ ಸ್ಥಳದ ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನ ವ್ಯವಸ್ಥೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ. ಸುದರ್ಶನ್ ಅವರು ಮಾತನಾಡಿ ಕಾರ್ಯಕ್ರಮದಲ್ಲಿ ಕಲಾತಂಡಗಳಿಂದ ಗೀತ ಗಾಯನವನ್ನು ಏರ್ಪಡಿಸಲಾಗುವುದು. ಆಹ್ವಾನ ಪತ್ರಿಕೆಯ ಮುದ್ರಣ ಮಾಡಿ ಸರ್ಕಾರದ ಶಿಷ್ಟಾಚಾರದಂತೆ ಜನ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಈ ಸಂಬಂಧ ಸಮಿತಿಯವರು ಸಹಕರಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು,  ಶ್ರೀ ಕೆಂಪೇಗೌಡ ಸಮುದಾಯದ ಮುಖಂಡರು ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular