Monday, April 21, 2025
Google search engine

HomeUncategorizedರಾಷ್ಟ್ರೀಯಎನ್‌ ಡಿಎ ಸರಕಾರ ಯಾವಾಗ ಬೇಕಾದರೂ ಬೀಳಬಹುದು: ಮಲ್ಲಿಕಾರ್ಜುನ ಖರ್ಗೆ

ಎನ್‌ ಡಿಎ ಸರಕಾರ ಯಾವಾಗ ಬೇಕಾದರೂ ಬೀಳಬಹುದು: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್‌ ಡಿಎ ಸರಕಾರ ತಪ್ಪಾಗಿ ರಚನೆಯಾಗಿದ್ದು ಇದು ಯಾವಾಗ ಬೇಕಾದರೂ ಬೀಳಬಹುದು ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಕುರಿತು ಹೇಳಿಕೆ ನೀಡಿದ ಅವರು ಅಧಿಕಾರಕ್ಕೆ ಬಂದಿರುವ ಎನ್‌ಡಿಎ ಸರ್ಕಾರ ತಪ್ಪಾಗಿ ರಚನೆಯಾಗಿದೆ, ಪ್ರಧಾನಿ ಮೋದಿಗೆ ಜನಾದೇಶವಿಲ್ಲ, ಇದು ಅಲ್ಪಸಂಖ್ಯಾತ ಸರ್ಕಾರವಾಗಿದ್ದು, ಯಾವಾಗ ಬೇಕಾದರೂ ಬೀಳಬಹುದು. ಆದರೆ ಎನ್‌ಡಿಎ ಸರಕಾರ ಚೆನ್ನಾಗಿ ನಡೆಯಲಿ ಎಂದು ನಾವು ಆಶಿಸುತ್ತೇವೆ ಆದರೆ ಪ್ರಧಾನಿ ಮೋದಿಯವರು ಸರಕಾರ ಸುಗಮವಾಗಿ ನಡೆಯಲು ಬಿಡುವುದಿಲ್ಲ, ದೇಶವನ್ನು ಬಲಪಡಿಸಲು ನಾವು ನಮ್ಮ ಕಡೆಯಿಂದ ಸಹಕರಿಸುತ್ತೇವೆ ಎಂದು ಹೇಳಿಕೊಂಡಿದ್ದಾರೆ.

ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು 240 ಸ್ಥಾನಗಳನ್ನು ಗಳಿಸಿತು, ಬಹುಮತದ 272 ಕ್ಕಿಂತ ಕಡಿಮೆಯಾಗಿದೆ ಮತ್ತು ಸರ್ಕಾರ ರಚಿಸಲು ಪಕ್ಷವು ತನ್ನ ಮಿತ್ರಪಕ್ಷಗಳ ಮೇಲೆ ಅವಲಂಬಿತವಾಗಿದೆ ಹಾಗಾಗಿ ಇದು ಐದು ವರ್ಷಗಳ ಕಾಲ ದೃಢವಾಗಿ ನಿಲ್ಲುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಅಲ್ಲದೆ ಪ್ರಧಾನಿ ಮೋದಿ ಇದಕ್ಕೆ ಆಸ್ಪದ ಕೊಡುವುದು ಇಲ್ಲ ಎಂದು ಹೇಳಿದ್ದಾರೆ.

ಇತ್ತ ಖರ್ಗೆ ಹೇಳಿಕೆ ಬೆನ್ನಲ್ಲೇ ಜೆಡಿಯು ತಿರುಗೇಟು ನೀಡಿದ್ದು ಈ ಹಿಂದೆ ಕಾಂಗ್ರೆಸ್ ಸರಕಾರ ಯಾವ ಪರಿಸ್ಥಿತಿಯನ್ನು ಅನುಭವಿಸಿದೆ ಎಂಬುದನ್ನು ಕಾಂಗ್ರೆಸ್ ನಾಯಕರು ಮೊದಲು ತಿಳಿದುಕೊಳ್ಳಲಿ ಆ ಬಳಿಕ ಬೇರೆ ಪಕ್ಷದ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ.

RELATED ARTICLES
- Advertisment -
Google search engine

Most Popular