Friday, April 11, 2025
Google search engine

Homeಕ್ರೀಡೆಭಾರತ ಮತ್ತು ಸೌತ್ ಆಫ್ರಿಕಾ ಮಹಿಳಾ ತಂಡಗಳ ನಡುವಣ ಸರಣಿ ಇಂದಿನಿಂದ ಶುರು

ಭಾರತ ಮತ್ತು ಸೌತ್ ಆಫ್ರಿಕಾ ಮಹಿಳಾ ತಂಡಗಳ ನಡುವಣ ಸರಣಿ ಇಂದಿನಿಂದ ಶುರು

ಭಾರತ ಮತ್ತು ಸೌತ್ ಆಫ್ರಿಕಾ ಮಹಿಳಾ ತಂಡಗಳ ನಡುವಣ ಸರಣಿ ಇಂದಿನಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 7 ಪಂದ್ಯಗಳನ್ನಾಡಲಾಗುತ್ತಿದ್ದು, ಮೊದಲು 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಇದಾದ ಬಳಿಕ ಏಕೈಕ ಟೆಸ್ಟ್ ಪಂದ್ಯ ನಡೆಯಲಿದ್ದು, ಆನಂತರ 3 ಪಂದ್ಯಗಳ ಟಿ20 ಸರಣಿಯನ್ನು ಆಡಲಾಗುತ್ತದೆ.

ವಿಶೇಷ ಎಂದರೆ ಏಕದಿನ ಸರಣಿಯ ಎಲ್ಲಾ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಹಾಗೆಯೇ ಟಿ20 ಸರಣಿಯು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಜರುಗಲಿದೆ. ಇನ್ನು ಏಕೈಕ ಟೆಸ್ಟ್ ಪಂದ್ಯಕ್ಕೂ ಎಂಎ ಚಿದಂಬರಂ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಈ ಸರಣಿಯ ಪಂದ್ಯಗಳನ್ನು ಸ್ಪೋರ್ಟ್ಸ್​18 ಚಾನೆಲ್​ನಲ್ಲಿ ಲೈವ್ ವೀಕ್ಷಿಸಬಹುದು. ಹಾಗೆಯೇ ಜಿಯೋ ಸಿನಿಮಾ ಆ್ಯಪ್​ನಲ್ಲೂ ಈ ಪಂದ್ಯಗಳ ನೇರ ಪ್ರಸಾರ ಇರಲಿದೆ.

ಭಾರತ ಮತ್ತು ಸೌತ್ ಆಫ್ರಿಕಾ ವೇಳಾಪಟ್ಟಿ:
1ನೇ ಏಕದಿನ ಪಂದ್ಯ: ಜೂನ್ 16 (ಭಾನುವಾರ)- ಎಂ ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು (1:30 PM IST)
2ನೇ ಏಕದಿನ ಪಂದ್ಯ: ಜೂನ್ 19 (ಬುಧವಾರ)- ಎಂ ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು (1:30 PM IST)
3ನೇ ODI: ಜೂನ್ 23 (ಭಾನುವಾರ)- ಎಂ ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು (1:30 PM IST)

ಏಕೈಕ ಟೆಸ್ಟ್ ಪಂದ್ಯ: ಜೂನ್ 28 ರಿಂದ ಜುಲೈ 1- ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ
1ನೇ ಟಿ20 ಪಂದ್ಯ: ಜುಲೈ 5 (ಶುಕ್ರವಾರ)- ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ (7:00 PM IST)
2ನೇ ಟಿ20 ಪಂದ್ಯ: ಜುಲೈ 7 (ಭಾನುವಾರ)- ಎಂಎ ಚಿದಂಬರಂ ಕ್ರೀಡಾಂಗಣ, ಚೆನ್ನೈ (7:00 PM IST)
3ನೇ ಟಿ20 ಪಂದ್ಯ: ಜುಲೈ 9 (ಮಂಗಳವಾರ)- ಎಂಎ ಚಿದಂಬರಂ ಕ್ರೀಡಾಂಗಣ, ಚೆನ್ನೈ (7:00 PM IST)

ಭಾರತ ಮಹಿಳಾ ತಂಡ: ಸ್ಮೃತಿ ಮಂಧಾನ , ಶಫಾಲಿ ವರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರೋಡ್ರಿಗಸ್ , ದೀಪ್ತಿ ಶರ್ಮಾ , ಪೂಜಾ ವಸ್ತ್ರಾಕರ್ , ಶ್ರೇಯಾಂಕಾ ಪಾಟೀಲ್, ರಾಧಾ ಯಾದವ್, ರೇಣುಕಾ ಠಾಕೂರ್ ಸಿಂಗ್, ಸೈಕಾ ಇಶಾಕ್, ದಯಾಲನ್ ಹೇಮಲತಾ , ಅರುಂಧ ಹೇಮಲತಾ ರೆಡ್ಡಿ ಉಮಾ ಚೆಟ್ರಿ, ಪ್ರಿಯಾ ಪುನಿಯಾ, ಆಶಾ ಸೋಭಾನ.

ಸೌತ್ ಆಫ್ರಿಕಾ ಮಹಿಳಾ ತಂಡ: ಲಾರಾ ವೊಲ್ವಾರ್ಡ್ಟ್ (ನಾಯಕಿ), ತಜ್ಮಿನ್ ಬ್ರಿಟ್ಸ್, ಡೆಲ್ಮಿ ಟಕರ್, ಸುನೆ ಲೂಸ್, ಮಾರಿಝನ್ನೆ ಕಪ್, ನಾಡಿನ್ ಡಿ ಕ್ಲರ್ಕ್, ಎಲಿಜ್-ಮಾರಿ ಮಾರ್ಕ್ಸ್, ಸಿನಾಲೊ ಜಾಫ್ತಾ (ವಿಕೆಟ್ ಕೀಪರ್), ಅಯಾಬೊಂಗಾ ಖಾಕಾ, ಮಸಾಬಟಾ ಕ್ಲಾಸ್, ನಾನ್ಕುಲುಲೆಕೊ ಮ್ಲಾಬಾ, ಅನ್ನೆಕೆ ಬಾಷ್, ತುಮಿ ಸೆಖುಖುನೆ, ನಂದುಮಿಸೊ ಶಾಂಗಸೆ, ಅನ್ನೇರಿ ಡೆರ್ಕ್ಸೆನ್, ಮೈಕೆ ಡಿ ರಿಡ್ಡರ್.

RELATED ARTICLES
- Advertisment -
Google search engine

Most Popular