Saturday, April 19, 2025
Google search engine

Homeರಾಜ್ಯಬೆಂಗಳೂರು: 3,843 ಅನಧಿಕೃತ ಫ್ಲೆಕ್ಸ್-ಬ್ಯಾನರ್‌ಗಳ ತೆರವು, 48 FIR ದಾಖಲು

ಬೆಂಗಳೂರು: 3,843 ಅನಧಿಕೃತ ಫ್ಲೆಕ್ಸ್-ಬ್ಯಾನರ್‌ಗಳ ತೆರವು, 48 FIR ದಾಖಲು

ಬೆಂಗಳೂರು: ನಗರದಲ್ಲಿ ಜೂನ್‌ 1ರಿಂದ 3,843 ಅನಧಿಕೃತ ಫ್ಲೆಕ್ಸ್/ಬ್ಯಾನರ್‌ಗಳನ್ನು ತೆರವು ಮಾಡಲಾಗಿದೆ. ಪೊಲೀಸ್ ಠಾಣೆಗೆ 76 ದೂರುಗಳನ್ನು‌ ಬಿಬಿಎಂಪಿ ನೀಡಿದ್ದು, ಈ ಪೈಕಿ 48 ಎಫ್‌ಐಆರ್ ದಾಖಲಿಸಲಾಗಿದೆ.

ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿದ್ದವರಿಗೆ ಒಟ್ಟು ₹75 ಸಾವಿರ ದಂಡ ವಿಧಿಸಲಾಗಿದೆ. ಆರ್.ಆರ್.ನಗರ ವಲಯದಲ್ಲಿ ₹50 ಸಾವಿರ, ಪಶ್ಚಿಮ ವಲಯದಲ್ಲಿ ₹25 ಸಾವಿರ ದಂಡ ವಿಧಿಸಲಾಗಿದೆ. ಮಹದೇವಪುರದಲ್ಲಿ ಅತಿಹೆಚ್ಚು (2399) ಫ್ಲೆಕ್ಸ್‌ ತೆರವುಗೊಳಿಸಲಾಗಿದೆ. ಪಶ್ಚಿಮ ವಲಯದಲ್ಲಿ 23 ದೂರುಗಳು ದಾಖಲಾಗಿವೆ ಎಂದು ಪ್ರಕಟಣೆ ತಿಳಿಸಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳ ಕುರಿತು ನಾಗರಿಕರು ಪಾಲಿಕೆ ಸಹಾಯವಾಣಿ ಸಂಖ್ಯೆ 1533 ಅಥವಾ ಜಾಹೀರಾತು ವಿಭಾಗದ ವ್ಯಾಟ್ಸಾಪ್ ಸಂಖ್ಯೆ 9480683939 ಗೆ ಛಾಯಾಚಿತ್ರ ಅಥವಾ ವೀಡಿಯೋ ಮಾಡಿ ವಿಳಾಸ ಸಹಿತ ಕಳುಹಿಸಿದಲ್ಲಿ ಪಾಲಿಕೆ ವತಿಯಿಂದ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು.

ಬ್ಯಾನರ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಇದುವರೆಗೆ ಪೊಲೀಸ್ ಠಾಣೆಯಲ್ಲಿ 76 ದೂರುಗಳನ್ನು‌ ನೀಡಿದ್ದು, 48 ಎಫ್‌ಐಆರ್ ದಾಖಲಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳು ಇರದಂತೆ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಅದರಂತೆ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ ಎಂದು ಪಾಲಿಕೆ ಮಾಹಿತಿ ನೀಡಿದೆ.

RELATED ARTICLES
- Advertisment -
Google search engine

Most Popular