ಜಾರ್ಖಂಡ್ ನ ಪಶ್ಚಿಮ ಸಿಂಗ್ ಭೂಮ್ ಜಿಲ್ಲೆಯಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆ ನಡೆಸಿದ ಜಂಟಿ ಎನ್ ಕೌಂಟ ರ್‌ನಲ್ಲಿ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತರಾದ ನಕ್ಸಲರಿಂದ ಭದ್ರತಾ ಪಡೆಗಳು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.
ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್, ಮಾತನಾಡಿ, ಶೋಧ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ ಎಂದರು. ಕಳೆದ ವಾರ ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿ ಸಿಪಿಐ (ಮಾವೋವಾದಿ) ಯ ವಿಭಜಿತ ಗುಂಪು ನಿಷೇಧಿತ ತೃತೀಯಾ ಸಮ್ಮೇಳನದ ಪ್ರಸ್ತುತಿ ಸಮಿತಿಯ (ಟಿಎಸ್‌ಪಿಸಿ) ಮೂವರು ಸದಸ್ಯರನ್ನು ಕಳೆದ ವಾರ ಬಂಧಿಸಿದ ನಂತರ ಈ ಘಟನೆ ನಡೆದಿದೆ.