ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಅತ್ಯಂತ ಸಡಗರ, ಸಂಭ್ರಮದಿಂದ ಬಕ್ರೀದ್ ಆಚರಿಸಲಾಗುತ್ತಿದೆ.
ಜಿಲ್ಲೆಯ ಮುಸ್ಲಿಮರು ಮಸೀದಿ, ಹಬ್ಬವನ್ನು ಆಚರಿಸಲಾಯಿತು.
ಸಾಮೂಹಿಕ ನಮಾಝ್ ಮಾಡಿ ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡು ಬಂತು.
ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸ್ಜಿದ್, ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್, ಪಂಪ್‌ವೆಲ್‌ನ ಮಸ್ಜಿದುತ್ತಖ್ವಾ, ಹಂಪನಕಟ್ಟೆಯ ಮಸ್ಜಿದುನ್ನೂರ್, ಸ್ಟೇಟ್‌ಬ್ಯಾಂಕ್‌ನ ಇಬ್ರಾಹೀಂ ಖಲೀಲ್ ಮಸ್ಜಿದ್, ಕಂಕನಾಡಿ ರಹ್ಮಾನಿಯಾ ಜುಮಾ ಮಸ್ಜಿದ್, ನಗರದ ವಾಸ್‌ಲೇನ್ ಇಹ್ಸಾನ್ ಮಸ್ಜಿದ್, ಪಾಂಡೇಶ್ವರ ಪೊಲೀಸ್‌ಲೇನ್‌ನ ಫೌಝಿಯಾ ಜುಮಾ ಮಸ್ಜಿದ್, ಬಂದರ್ ಕಚ್ಚೀ ಮೇಮನ್ ಜುಮಾ ಮಸ್ಜಿದ್, ಬಂದರ್ ಕಂದುಕ ಬದ್ರಿಯಾ ಜುಮಾ ಮಸ್ಜಿದ್, ಬೋಳಾರ ಮುಹಿಯುದ್ದೀನ್ ಜುಮಾ ಮಸ್ಜಿದ್, ಕುದ್ರೋಳಿ ಜಾಮೀಯಾ ಜುಮಾ ಮಸ್ಜಿದ್, ಬಿಕರ್ನಕಟ್ಟೆ ಅಹಸನುಲ್ ಮಸಾಜೀದ್ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಜುಮಾ ಮಸ್ಜಿದ್ ಮತ್ತು ಈದ್ಗಾಗಳಲ್ಲಿ ನಮಾಝ್ ಹಾಗೂ ಖುತ್ಬಾ ನೆರವೇರಿಸಲಾಯಿತು.