ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ತನಿಖೆ ಬಳಿಕ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ತನಿಖೆ ಬಳಿಕ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಲು ತೆರಳಬೇಕಿತ್ತು, ಆದರೆ ಹೋಗಲು ಆಗಿರಲಿಲ್ಲ.ರೇಣುಕಾಸ್ವಾಮಿ ಮನೆಗೆ ಇಂದು ಅಥವಾ ನಾಳೆ ಹೋಗುತ್ತೇನೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾರೇ ಭಾಗಿ ಆದರೂ ಅವರ ವಿರುದ್ಧ ಕ್ರಮ ಕೈಗೊಳ್ತೇವೆ ಎಂದರು.