ಮೈಸೂರು : ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಬಡ ಜನರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದು ಶಾಸಕರಾದ ಟಿ ಎಸ್ ಶ್ರೀವತ್ಸ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ತ್ರಿವೇಣಿ ಗೆಳೆಯರ ಬಳಗದ 30ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಇದೇ ತಿಂಗಳು 22ರಂದು ವಾರ್ಡ್ ನಂಬರ್ 35ರ ತ್ರಿವೇಣಿ ವೃತ್ತದ ಕೆ ಎಸ್ ಇ ಬಿ ಕಾಲೋನಿಯಲ್ಲಿ ಸ್ಪರ್ಶ ಆಸ್ಪತ್ರೆಯ ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ಕಣ್ಣಿನ ತಪಾಸಣೆ ಮತ್ತು ದಂತ ತಪಾಸಣೆ, ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು, ಅದರ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು ಹಿಂದುಳಿದ ಪ್ರದೇಶಗಳಲ್ಲಿ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ.
ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಬಿಪಿ, ಶುಗರ್, ಹೃದ್ರೋಗ ಹಾಗೂ ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿವೆ. ಇವು ಶ್ರೀಮಂತಖಾಯಿಲೆಗಳಾಗಿದ್ದು, ಬಡಜನರು ಆರ್ಥಿಕವಾಗಿ ಭರಿಸಲು ಅಸಾಧ್ಯ. ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ ಎಂದು ಹೇಳಿದರು.
ನಂತರ ತ್ರಿವೇಣಿ ಗೆಳೆಯರ ಬಳಗದ ಅಧ್ಯಕ್ಷ ಬಿ ಆನಂದ್ ಮಾತನಾಡಿ ಈ ಆರೋಗ್ಯ ತಪಾಸಣೆ ಶಿಬಿರವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ಉಚಿತ ಆರೋಗ್ಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ದಂತ ತಪಾಸಣೆ, ಸಕ್ಕರೆ ಕಾಯಿಲೆ ಮತ್ತು ಬಿಪಿ ಪರೀಕ್ಷೆಯನ್ನು ನುರಿತ ತಜ್ಞರಿಂದ ನಡೆಸಲಾಗುವುದು ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು ಸ್ವಯಂ ಪ್ರೇರಿತ ರಕ್ತದಾನ ಮಾಡಲು ಇಚ್ಚಿಸುವವರು
9901259093/9900809019 ನಂಬರಿಗೆ ಸಂಪರ್ಕಿಸಿ ನೊಂದಾಯಿಸಿಕೊಳ್ಳಬಹುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಜಯರಾಮ್, ಪ್ರದೀಪ್ ಕುಮಾರ್, ಕಿಶೋರ್, ಕೀರ್ತಿ, ಸಚಿನ್ ನಾಯಕ್, ಹಾಗೂ ಇನ್ನಿತರರು ಹಾಜರಿದ್ದರು.