Sunday, April 20, 2025
Google search engine

Homeರಾಜ್ಯಕುವೈತ್ ಅಗ್ನಿ ದುರಂತ: ಕಲಬುರಗಿ ಮೂಲದ ಮೃತನ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ....

ಕುವೈತ್ ಅಗ್ನಿ ದುರಂತ: ಕಲಬುರಗಿ ಮೂಲದ ಮೃತನ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ನೆರವು

ಬೆಂಗಳೂರು: ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ವಿಜಯ್ ಕುಮಾರ್ ಪ್ರಸನ್ನ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ೫ ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಪ್ರಸನ್ನ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸಾರಸಾಂಬಾ ಗ್ರಾಮದವರು. ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ (ಸಿಎಂಆರ್‌ಎಫ್) ೫ ಲಕ್ಷ ರೂ. ಪರಿಹಾರ ನೀಡಲಾಗಿದೆ. ಪ್ರಸನ್ನ ಅವರು ಕುವೈತ್‌ನಲ್ಲಿ ಎಂಟು ವರ್ಷಗಳಿಂದ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದರು.

ರಾಜ್ಯ ಸರ್ಕಾರದ ಪತ್ರಿಕಾ ಪ್ರಕಟಣೆಯ ಪ್ರಕಾರ, ಪ್ರಸನ್ನ ಅವರು ಒಡಹುಟ್ಟಿದವರು ಸೇರಿದಂತೆ ಎಂಟು ಮಂದಿ ಅವಲಂಬಿತರನ್ನು ಹೊಂದಿದ್ದಾರೆ. ಕರ್ನಾಟಕ ಎನ್‌ಆರ್‌ಐ ಫೋರಂನ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ಮನವಿ ಆಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರಕ್ಕೆ ಅನುಮೋದನೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular