ಬೆಂಗಳೂರು: ಪೋಲಿಸ್ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನಲೆಯಲ್ಲಿಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಮತ್ತು ಆತನ ಸಹಚರರನ್ನು ಇಂದು ಮಧ್ಯಾಹ್ನ ೩:೫೦ ಗಂಟೆ ಸುಮಾರಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರು ಪಡಿಸಿದರು. ಇದೇ ವೇಳೆ ನ್ಯಾಯಾಧೀಶರು ನಟ ದರ್ಶನ್ ಅವರನ್ನು ಎರಡು ದಿನ ಪೋಲಿಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿತು.
ಬಹುತೇಕ ಪ್ರಕ್ರಿಯೆಗಳು ಮುಕ್ತಾಯವಾದರೂ ದರ್ಶನ್ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕೆಂದು ಎಸ್‌ಪಿಪಿ ವಾದ ಮಂಡಿಸಿದರು. ಈ ವಾದವನ್ನು ಪುರಸ್ಕರಿಸಿದ ಕೋರ್ಟ್ ಮತ್ತೆ ದರ್ಶನ್ ಮತ್ತು ಉಳಿದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿತು.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿಂದು ಮತ್ತೆ ನ್ಯಾಯಾಲಯದ ಮುಂದೆ ನಟ ದರ್ಶನ್ ಸೇರಿ ಬಂಧಿತ ೧೭ ಆರೋಪಿಗಳನ್ನು ಪೊಲೀಸರು ಹಾಜರು ಪಡಿಸಿದರು.
ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ಕೆರಳಿದ್ದ ದರ್ಶನ್ ಅಂಡ್ ಗ್ಯಾಂಗ್ ಹಲ್ಲೆ ಮಾಡಿ ಹತ್ಯೆ ಮಾಡಿರುವ ಆರೋಪವಿದ್ದು ಅವರನ್ನು ಕಳೆದ ಜೂನ್ ೧೧ರಂದು ಅರೆಸ್ಟ್ ಮಾಡಲಾಗಿತ್ತು. ಕಳೆದ ೧೦ ದಿನಗಳಿಂದ ಕಸ್ಟಡಿಯಲ್ಲಿ ಇರುವ ಎಲ್ಲಾ ೧೯ ಮಂದಿ ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಗುರುವಾರ ಅಂತ್ಯವಾಗಿತ್ತು. ಈ ಹಿನ್ನಲೆಯಲ್ಲಿ ಎಲ್ಲರನ್ನೂ ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
ಎಲ್ಲಾ ೧೯ ಮಂದಿ ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಗುರುವಾರ ಅಂತ್ಯವಾಗಿತ್ತು. ಈ ಹಿನ್ನಲೆಯಲ್ಲಿ ಎಲ್ಲರನ್ನೂ ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.