ಟಿ೨೦ ವಿಶ್ವಕಪ್‌ನ ಸೂಪರ್ ೮ರ ಹಂತದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾವು ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ರೋಹಿತ್ ಶರ್ಮಾ ಬಳಗ, ಆರಂಭಿಕ ಆಘಾತದ ಹೊರತಾಗಿಯೂ ಸೂರ್ಯ ಕುಮಾರ್ ಬಾರಿಸಿದ ಅರ್ಧಶತಕದ ನೆರವಿನಿಂದ ನಿಗದಿತ ೨೦ ಓವರ್‌ಗಳಲ್ಲಿ ೭ ವಿಕೆಟ್ ಕಳೆದುಕೊಂಡು ೧೮೧ ರನ್ ಗಳಿಸಿತ್ತು. ಆ ಮೂಲಕ ಅಫ್ಘಾನಿಸ್ತಾನ ತಂಡಕ್ಕೆ ಸವಾಲಿನ ಗುರಿ ನೀಡಿತ್ತು.
ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ರಶೀದ್ ಖಾನ್ ನೇತೃತ್ವದ ಅಫ್ಘಾನಿಸ್ತಾನ ತಂಡವು ನಿಗದಿತ ೨೦ ಓವರ್‌ಗಳಲ್ಲಿ ೧೩೪ ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಟೀಮ್ ಇಂಡಿಯಾವು ೪೭ ರನ್‌ಗಳ ಭರ್ಜರಿ ಜಯ ದಾಖಲಿಸಿತು. ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಜಸ್ಪೀತ್ ಬುಮ್ರಾ ನೇತೃತ್ವದ ಟೀಮ್ ಇಂಡಿಯಾದ ಬೌಲರ್‌ಗಳ ದಾಳಿಗೆ ರನ್ ಗಳಿಸಲು ಪರದಾಡಿದ ಅಫ್ಘಾನಿಸ್ತಾನದ ಬ್ಯಾಟರ್‌ಗಳು, ೪೭ ರನ್‌ಗಳಿಂದ ಸೋಲೊಪ್ಪಿಕೊಂಡರು. ಅಫ್ಘಾನ್ ಪರ ೨೬ ರನ್ ಗಳಿಸುವ ಮೂಲಕ ಅಝ್ಮತುಲ್ಲಾ ಒಮರ್ ಝಾಯ್ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಉಳಿದಂತೆ ನಜೀಬುಲ್ಲಾ ಝದ್ರಾನ್ ೧೯, ಗುಲಾಮ್ ನೈಬ್ ೧೭ ಹಾಗೂ ಮೊಹಮ್ಮದ್ ನಬಿ ೧೪ ರನ್ ಗಳಿಸಲಷ್ಟೇ ಶಕ್ತರಾದರು.