Sunday, April 20, 2025
Google search engine

Homeರಾಜ್ಯಬಳ್ಳಾರಿಯಲ್ಲಿ ಸಿಎಂ ಸಿದ್ದರಾಮಯ್ಯ ಯೋಗ: ನಟಿ ಶ್ರೀಲೀಲಾ ಸಾಥ್

ಬಳ್ಳಾರಿಯಲ್ಲಿ ಸಿಎಂ ಸಿದ್ದರಾಮಯ್ಯ ಯೋಗ: ನಟಿ ಶ್ರೀಲೀಲಾ ಸಾಥ್

ಬಳ್ಳಾರಿ: ೧೦ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳ್ಳಾರಿಯ ಸಂಡೂರ ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್ ವಿದ್ಯಾನಗರದಲ್ಲಿ ಯೋಗ ಪ್ರದರ್ಶನ ಮಾಡಿದರು.

ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶನ ನೀಡಿದರು. ಇದರೊಂದಿಗೆ ನಟಿ ಶ್ರೀಲೀಲಾ, ಸಚಿವ ಸಂತೋಷ ಲಾಡ್, ಸಂಸದ ಈ. ತುಕಾರಾಂ ಜಿಲ್ಲೆಯ ಶಾಸಕರು ಹಾಗೂ ಮುಖಂಡರು ಸಿಎಂಗೆ ಸಾಥ್ ನೀಡಿದರು.
ವಚನಾನಂದ ಶ್ರೀಗಳ ನೇತೃತ್ವದಲ್ಲಿ ಯೋಗ ಕಾರ್ಯಕ್ರಮ ಆರಂಭವಾಯಿತು. ವಿನಯ್ ಗುರೂಜಿ ಅವರು ಯೋಗ ಕಾರ್ಯಕ್ರಮ ನಿರ್ವಹಣೆ ಮಾಡಿದರು.

RELATED ARTICLES
- Advertisment -
Google search engine

Most Popular