ಮಂಡ್ಯ: ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಮಹಿಳೆಯಿಂದ ಅವ್ಯಾಚ್ಯ ಶಬ್ದ ಬಳಕೆ ಹಿನ್ನೆಲೆ ಮಹಿಳೆಯ ವಿರುದ್ಧ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಗೆ ಜೆಡಿಎಸ್ ಕಾರ್ಯಕರ್ತರು ದೂರು ನೀಡಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಫೇಸ್ಬುಕ್ ಖಾತೆಯಲ್ಲಿ ಮಂಗಳ ಹೆಸರಿನ ಮಹಿಳೆ ಹೆಚ್ ಡಿಕೆಗೆ ಅವ್ಯಾಚ್ಯ ಶಬ್ದ ಬಳಕೆ ಮಾಡಿ ವಿವಾದಾತ್ಮಕ ಪೋಸ್ಟ್ ಮಾಡಿದ್ದಾರೆ.
ನಟ ದರ್ಶನ್ ಬಂಧನ ಪ್ರಕರಣದಲ್ಲಿ ಮಂಡ್ಯದಲ್ಲಿ ಕುಮಾರಸ್ವಾಮಿ ದರ್ಶನ್ ವಿರುದ್ಧ ಪ್ರತಿಭಟನೆ ಮಾಡಿಸಿರೋದಾಗಿ ಮಹಿಳೆ ಆಕ್ರೋಶ ಹೊರಹಾಕಿದ್ದಾರೆ.
ತಮ್ಮ ನಾಯಕನ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿ ಆಕ್ರೋಶಕ್ಕೆ ರೊಚ್ಚಿಗೆದ್ದಿರುವ ಜೆಡಿಎಸ್ ಕಾರ್ಯರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸಚಿವರ ತೇಜೋವಧೆ ಮಾಡ್ತಿರೋ ಆರೋಪದಡಿ ಕೆ.ಆರ್.ಪೇಟೆ ಜೆಡಿಎಸ್ ಮುಖಂಡ ವಕೀಲ ಧನಂಜಯ್ ಕುಮಾರ್ ನೇತೃತ್ವದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಕೂಡಲೇ ಮಹಿಳೆಯನ್ನ ಬಂಧಿಸಿ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.