ಬಳ್ಳಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಗಾಭ್ಯಾಸ ಮಾಡುವ ಮೂಲಕ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಬೆಳಗ್ಗೆ ಸಂಡೂರು ತಾಲೂಕಿನ ತೋರಣಗಾಳದ ಜೆಎಸ್‌ಡಬ್ಲ್ಯು ಟೌನ್‌ಶಿಪ್ ವಿದ್ಯಾನಗರದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ವೇದಿಕೆಯಲ್ಲಿ ಮುಖ್ಯಮಂತ್ರಿಗಳು, ಮಕ್ಕಳು, ಸಾರ್ವಜನಿಕರು ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನತೆ ನೆರೆದಿದ್ದವರಿಗೆ ಯೋಗದ ವಿವಿಧ ಆಸನಗಳನ್ನು ಅಭ್ಯಾಸ ಮಾಡಿದರು. ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ದಿನವಿಡೀ ಜನರ ಆರೋಗ್ಯ ಸುಧಾರಿಸುವುದರ ಜೊತೆಗೆ ಜನರ ಆರೋಗ್ಯಕ್ಕೆ ಸಹಕಾರಿಯಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಪ್ರತಿನಿತ್ಯ ಯೋಗಾಭ್ಯಾಸ ಮಾಡುವಂತೆ ವಿನಂತಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಆಸಕ್ತಿಯಿಂದ ಯೋಗದಲ್ಲಿ ಪಾಲ್ಗೊಂಡು ವಿವಿಧ ಆಸನಗಳನ್ನು ಅಭ್ಯಾಸ ಮಾಡಿದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಖ್ಯಾತ ಚಿತ್ರನಟಿ ಶ್ರೀಲೀಲಾ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾದರು. ನಟಿ ಶ್ರೀಲೀಲಾ ಕೂಡ ಖುಷಿಯಿಂದ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ಮಿಂಚಿದರು. ಸಮಾರಂಭದಲ್ಲಿದ್ದ ಮಕ್ಕಳಾದ ನಟಿ ಶ್ರೀಲೀಲಾ ಅವರಿಗೆ ಸಾರ್ವಜನಿಕರು ಚಪ್ಪಾಳೆಗಳ ಸುರಿಮಳೆಗೈದರು. ಶ್ರೀಲೀಲಾ ಹರ್ಷದಿಂದ ಪ್ರತಿಕ್ರಿಯಿಸಿ, ಬಳ್ಳಾರಿ ಜಿಲ್ಲೆಯ ತೋರಣಗಲ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಸಂದರ್ಭದಲ್ಲಿ ನಿಮ್ಮೆಲ್ಲರನ್ನು ಈ ರೀತಿ ಭೇಟಿಯಾಗಲು ಸಂತೋಷವಾಯಿತು. ಜನರು ನನ್ನ ಮೇಲೆ ತೋರುವ ಪ್ರೀತಿಗೆ ನಾನು ಚಿರ ಋಣಿ. ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ಉತ್ತಮವಾಗುತ್ತದೆ. ಪ್ರತಿಯೊಬ್ಬರೂ ಪ್ರತಿನಿತ್ಯ ಯೋಗಾಭ್ಯಾಸ ಮಾಡಬೇಕು ಎಂದು ಕರೆ ನೀಡಿದರು. ಸಮಾರಂಭದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಟಿ ಶ್ರೀಲೀಲಾ, ಸಾರ್ವಜನಿಕರು ಮೊಬೈಲ್ ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಮಕ್ಕಳು, ಜನರು ನಟಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದು ಕಂಡುಬಂತು.

ಬಳ್ಳಾರಿ ಜಿಲ್ಲೆಯ ಕಲಾವಿದ ಮಂಜುನಾಥ ಗೋವಿಂದವಾಡ ರಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಲಾಕೃತಿಯನ್ನು ಕಲಾವಿದರು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ೧೨ನೇ ಶತಮಾನದ ಕವಯಿತ್ರಿ ಅಕ್ಕಮಹಾದೇವಿ ಅವರ ಬೃಹತ್ ಚಿತ್ರ ಕಲಾಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಸಾವಿರಾರು ವಿದ್ಯಾರ್ಥಿಗಳು, ಮಕ್ಕಳು, ಸಾರ್ವಜನಿಕರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಯೋಗಾಭ್ಯಾಸ ಮಾಡುವ ಮೂಲಕ ಸಂಭ್ರಮಿಸಿದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್, ಸಂಸದ ಇ. ತುಕಾರಾಂ, ಕೆ.ಎಂ.ಎಫ್ ಅಧ್ಯಕ್ಷ ಭೀಮಾ ನಾಯಕ್, ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್, ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ವಡ್ಡು ಗ್ರಾ.ಪಂ.ಅಧ್ಯಕ್ಷೆ ನಿಂಗಮ್ಮ ನಾಗರಾಜ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿ.ಪಂ. ಕಾರ್ಯಕ್ರಮದಲ್ಲಿ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಸ್ಪಿ ರಂಜಿತ್ ಕುಮಾರ್ ಬಂದಾರು, ಉಪ ವಿಭಾಗಾಧಿಕಾರಿ ಎನ್.ಹೇಮಂತ್, ಗಣ್ಯರಾದ ವಿನಯ್ ಗುರೂಜಿ ಮತ್ತಿತರರು ಭಾಗವಹಿಸಿದ್ದರು.