ಬೆಂಗಳೂರು : ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಅಸಹಜ ಲೈಂಗಿಕ ಕ್ರಿಯೆ ಆರೋಪ ಸಂಬಂಧ ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುವ ಸಾಧ್ಯತೆ ಇದೆ.
ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ಆರೋಪದ ಹಿನ್ನೆಲೆಯಲ್ಲಿ ಇಂದು ವಕೀಲರ ಮೂಲಕ ದೂರು ದಾಖಲಿಸಲು ಸಂತ್ರಸ್ತ ಯುವಕ ತಯಾರಿ ನಡೆಸಿದ್ದಾನೆ ಎನ್ನಲಾಗಿದೆ.
ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಜೆಡಿಎಸ್ ಕಾರ್ಯಕರ್ತನೊಬ್ಬ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಈ ಕುರಿತಂತೆ ಸಂತ್ರಸ್ತರೊಬ್ಬರು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್, ಡಿಜಿ ಮತ್ತು ಐಜಿಪಿ ಹಾಗೂ ಹಾಸನ ಎಸ್ಪಿಗೆ ದೂರು ನೀಡಿದ್ದಾರೆ. ಅದರಲ್ಲಿ ಜೂನ್.೧೬ರಂದು ಸೂರಜ್ ರೇವಣ್ಣ ಅವರು ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡು, ಬಲವಂತವಾಗಿ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬುದಾಗಿ ಹೇಳಿದ್ದಾರೆ.
ಜೆಡಿಎಸ್ ಕಾರ್ಯಕರ್ತರೊಬ್ಬರು ಸಲ್ಲಿಸಿದಂತ ದೂರಿನ ಹಿನ್ನಲೆಯಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಹೆಚ್.ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ನಂತ್ರ ಈಗ ಸೂರಜ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ.