ಹೈದರಾಬಾದ್: ಕೃಷಿ ಸಾಲ ಮನ್ನಾ ಯೋಜನೆಗೆ ಅನುಮೋದನೆ ನೀಡಿರುವ ತೆಲಂಗಾಣ ಸಚಿವ ಸಂಪುಟ, ರೈತ ಭರೋಸಾ’ ಯೋಜನೆ ಅನುಷ್ಠಾನದಲ್ಲಿ ಪಾರದರ್ಶಕತೆ ಖಾತ್ರಿಪಡಿಸುವ ಸಲುವಾಗಿ ಸಂಪುಟ ಉಪಸಮಿತಿ ನೇಮಕ ಮಾಡಲು ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ಮಾತನಾಡಿ, ವಿಧಾನಸಭೆ ಚುನಾವಣೆಗೂ ಮುನ್ನ ವಾರಂಗಲ್‌ನಲ್ಲಿ ಪ್ರಕಟಿಸಿದ ರೈತ ಘೋಷಣೆ’ಯಲ್ಲಿ ಹೇಳುವಂತೆ ಕೃಷಿ ಸಾಲ ಮನ್ನಾ ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದರು.
೨೦೧೮ರ ಡಿಸೆಂಬರ್ ೧೨ರಿಂದ ೨೦೨೩ರ ಡಿಸೆಂಬರ್ ೯ರ ವರೆಗಿನ ಅವಧಿಯಲ್ಲಿ ರೈತರು ತೆಗೆದುಕೊಂಡಿರುವ ಕೃಷಿ ಸಾಲವನ್ನು ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ೩೧ ಸಾವಿರ ಕೋಟಿ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ ಎಂದರು. ರೈತು ಭರೋಸಾ ಯೋಜನೆ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಪಾಡುವುದಕ್ಕಾಗಿ ರಚಿಸಿರುವ ಸಂಪುಟ ಉಪಸಮಿತಿ ನೇತೃತ್ವವನ್ನು ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ವಹಿಸುವರು. ಈ ಉಪಸಮಿತಿಯು ಜುಲೈ ೧೫ರ ಒಳಗಾಗಿ ತನ್ನ ವರದಿ ಸಲ್ಲಿಸಲಿದೆ ಎಂದು ತಿಳಿಸಿದರು.