ಮಂಗಳೂರು(ದಕ್ಷಿಣ ಕನ್ನಡ): ಕೇಂದ್ರ ಬಿಜೆಪಿ ಸರಕಾರದ ಅವ್ಯವಸ್ಥೆಯಿಂದಾಗಿ ಯುಜಿಸಿ-ಎನ್‌ಇಟಿ ಪರೀಕ್ಷೆ ರದ್ದಾಗಿದ್ದು, ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಕಾಗಿರುವುದನ್ನು ಖಂಡಿಸಿ ಎನ್‌ಎಸ್‌ಯುಐ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರು ನಗರದ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ದ.ಕ. ಜಿಲ್ಲಾ ಉಪಾಧ್ಯಕ್ಷ ಸುಖ್ವಿಂದರ್ ಸಿಂಗ್, ನಜೀಬ್ ಮಂಚಿ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಎನ್‌ಎಸ್‌ಯುಐ ಅಧ್ಯಕ್ಷ ಕ್ರಿಸ್ಟನ್ ಮಿನೇಜಸ್, ಬಂಟ್ವಾಳ ವಿಧಾನಸಭಾ ಕ್ಷೇತ್ರ ಎನ್‌ಎಸ್‌ಯುಐ ಅಧ್ಯಕ್ಷ ಸಫ್ವಾನ್ ಸರವು, ದ.ಕ. ಜಿಲ್ಲಾ ಕಾರ್ಯದರ್ಶಿ ರೋನ್‌ಸ್ಟನ್ ಸಿಕ್ವೇರಾ, ವಿಶಾಲ್, ಸೋಹಾನ್, ಸೃಜನ್, ಫಾರೂಕ್ ಮತ್ತಿತರರು ಪಾಲ್ಗೊಂಡಿದ್ದರು.