Sunday, April 20, 2025
Google search engine

Homeರಾಜ್ಯಸೂರಜ್ ರೇವಣ್ಣ ಪ್ರಕರಣದ ಬಗ್ಗೆ ನನ್ನ ಬಳಿ ಕೇಳಬೇಡಿ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ

ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ನನ್ನ ಬಳಿ ಕೇಳಬೇಡಿ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ

ಚಿಕ್ಕಬಳ್ಳಾಪುರ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿಂದು ಮಾತನಾಡುತ್ತಾ, ದಯವಿಟ್ಟು ಇಂತಹ ವಿಷಯಗಳನ್ನ ನನ್ನ ಬಳಿ ಚರ್ಚೆ ಮಾಡಬೇಡಿ, ರಾಜ್ಯದ ಸಮಸ್ಯೆಗಳಿಗೆ ಸಂಬಂಧಪಟ್ಟ ವಿಚಾರಗಳನ್ನು ಮಾತ್ರ ಚರ್ಚೆ ಮಾಡಿ. ಅದರ ಅವಶ್ಯಕತೆ ಏನಿದೆ? ಕಾನೂನು ಇದೆ ಕಾನೂನಿನ ಅಡಿ ಎಲ್ಲವೂ ನಡೆಯಲಿದೆ. ಯಾಕೆ ಪ್ರಕರಣ ಬರ್ತಿದೆ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ನನ್ನ ಬಳಿ ಆ ತರಹದ ಪ್ರಶ್ನೆಗಳನ್ನ ಕೇಳಬೇಡಿ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular