Sunday, April 20, 2025
Google search engine

Homeರಾಜ್ಯಬಿಜೆಪಿ ಆಡಳಿತ ದೇಶದ ಕೋಟ್ಯಂತರ ಯುವಕರ ಭವಿಷ್ಯ ಹಾಳು ಮಾಡಿದೆ: ಪ್ರಿಯಾಂಕಾ ಗಾಂಧಿ

ಬಿಜೆಪಿ ಆಡಳಿತ ದೇಶದ ಕೋಟ್ಯಂತರ ಯುವಕರ ಭವಿಷ್ಯ ಹಾಳು ಮಾಡಿದೆ: ಪ್ರಿಯಾಂಕಾ ಗಾಂಧಿ

ನವದೆಹಲಿ: ಬಿಜೆಪಿ ಆಡಳಿತದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯು ರಾಷ್ಟ್ರೀಯ ಸಮಸ್ಯೆಯಾಗಿ ಮಾರ್ಪಟ್ಟಿದೆ ಮತ್ತು ದೇಶದ ಕೋಟ್ಯಂತರ ಯುವಕರ ಭವಿಷ್ಯವನ್ನು ಹಾಳು ಮಾಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನೀಟ್ ಹಗರಣ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಇದರಿಂದಾಗಿ ೨೪ ಲಕ್ಷ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಲಿದೆ ಎಂದು ಹೇಳಿದ್ದಾರೆ.

ಕಳೆದ ಐದು ವರ್ಷಗಳಲ್ಲಿ. ದೇಶದಲ್ಲಿ ೪೩ ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ. ಬಿಜೆಪಿ ಆಡಳಿತದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯು ರಾಷ್ಟ್ರೀಯ ಸಮಸ್ಯೆಯಾಗಿ ಮಾರ್ಪಟ್ಟಿದೆ. ಇದು ಕೋಟ್ಯಂತರ ಯುವಕರ ಭವಿಷ್ಯವನ್ನು ಹಾಳು ಮಾಡಿದೆ. ದೇಶವು ಅತಿ ಹೆಚ್ಚು ಯುವಜನತೆಯನ್ನು ಹೊಂದಿದೆ. ಈ ಯುವಜನರನ್ನು ಕೌಶಲ್ಯ ಮತ್ತು ಸಮರ್ಥರನ್ನಾಗಿ ಮಾಡುವ ಬದಲು ಬಿಜೆಪಿ ಸರ್ಕಾರ ಅವರನ್ನು ದುರ್ಬಲಗೊಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular