ಮೈಸೂರು : ಕರ್ನಾಟಕ ಭೀಮ ಸೇನೆ ಮೈಸೂರು ಜಿಲ್ಲಾ ಘಟಕದಿಂದ ಜೂನ್,೨೪ ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಟೌನ್‌ಹಾಲ್‌ನಲ್ಲಿ ನುಡಿ ನಮನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಮೈಸೂರು ಜಿಲ್ಲಾಧ್ಯಕ್ಷ ಎಸ್.ಸರ್ವೇಶ್ ತಿಳಿಸಿದ್ದಾರೆ.
ದಲಿತರ ಕಣ್ಮಣಿಗಳಾದ ಮಾಜಿ ಸಂಸದರೂ ಆದ ದಿ.ವಿ.ಶ್ರೀನಿವಾಸ ಪ್ರಸಾದ್, ದಿ.ಆರ್. ಧ್ರುವನಾರಾಯಣ, ನಿವೃತ್ತ ಐಎಎಸ್ ಅಧಿಕಾರಿ ದಿ.ಕೆ.ಶಿವರಾಂ ಮತ್ತು ಹೋರಾಟಗಾರ ದಿ.ಮಂಟೇಲಿಂಗಯ್ಯ ಅವರಿಗೆ ನುಡಿ ನಮನ ಸಲ್ಲಿಸಲಾಗುವುದು. ಬಳಿಕ ಇದೇ ವೇದಿಕೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು.
ಸಮಾರಂಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ,ಮಹದೇವಪ್ಪ, ಉರಿಲಿಂಗಿ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ, ಶಾಸಕರಾದ ಜಿ.ಟಿ.ದೇವೇಗೌಡ, ಕೆ.ಹರೀಶ್‌ಗೌಡ, ಶ್ರೀವತ್ಸ, ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ, ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಸುನೀಲ್ ಬೋಸ್, ವಿಧಾನ ಪರಿಷತ್ ಸದಸ್ಯರಾದ ಕೆ.ವಿವೇಕಾನಂದ, ಮಾಜಿ ಶಾಸಕರಾದ ನಾಗೇಂದ್ರ, ರಾಮದಾಸ್, ಸಾರಾ ಮಹೇಶ್, ಎನ್.ಮಹೇಶ್ ಮುಂತಾದವರು ಉಪಸ್ಥಿತರಿರುತ್ತಾರೆ ಎಂದರು.