Sunday, April 20, 2025
Google search engine

Homeರಾಜಕೀಯಸಿಎಂ, ಡಿಸಿಎಂ ಅಹಂಕಾರಕ್ಕೆ ಜನ ಕಪಾಳ ಮೋಕ್ಷ ಮಾಡಿದ್ದಾರೆ: ಪ್ರಲ್ಹಾದ್ ಜೋಶಿ ವಾಗ್ದಾಳಿ

ಸಿಎಂ, ಡಿಸಿಎಂ ಅಹಂಕಾರಕ್ಕೆ ಜನ ಕಪಾಳ ಮೋಕ್ಷ ಮಾಡಿದ್ದಾರೆ: ಪ್ರಲ್ಹಾದ್ ಜೋಶಿ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಅಪಪ್ರಚಾರದ ನಡುವೆಯೂ ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ 19 ಕ್ಷೇತ್ರಗಳಲ್ಲಿ ಗೆದ್ದಿದೆ. ಈ ಮೂಲಕ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರ ಅಹಂಕಾರಕ್ಕೆ ಜನ ಕಪಾಳ ಮೋಕ್ಷ ಮಾಡಿದ್ದಾರೆ. ಇವರು ಗ್ಯಾರಂಟಿ ನೀಡಿ ಜನರ ತಲೆ ಮೇಲೆ ಚಪ್ಪಡಿ ಕಲ್ಲು ಎಳೆದಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ಮಾಡಿದರು.

ರಾಜ್ಯದಿಂದ ಆಯ್ಕೆಯಾದ ನೂತನ ಬಿಜೆಪಿ ಹಾಗೂ ಜೆಡಿಎಸ್ ಸಂಸದರಿಗೆ ಮತ್ತು ಕೇಂದ್ರ ಸಚಿವರಿಗೆ ಅರಮನೆ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಲ್ಹಾದ್​ ಜೋದಿ, ಮೂರನೇ ಬಾರಿ ಮೋದಿ ಪ್ರಧಾನಿ ಆಗಿದ್ದಕ್ಕೆ ಕಾಂಗ್ರೆಸ್​ಗೆ ಹೊಟ್ಟೆಕಿಚ್ಚು ಶುರುವಾಗಿದೆ ಎಂದರು.

ಬಿಜೆಪಿಯನ್ನು ವಿರೋಧಿಸಲೆಂದೇ ಸೋ ಕಾಲ್ಡ್ ಇಂಡಿಯಾ ಮೈತ್ರಿಕೂಟ ಹುಟ್ಟಿಕೊಂಡಿದೆ. ಇಂಡಿಯಾ ಮೈತ್ರಿ ಒಕ್ಕೂಟಕ್ಕೆ ಅರ್ಥವೇ ಇಲ್ಲ. ಕಾಂಗ್ರೆಸ್ ಪಕ್ಷ ದೇಶದ ಜನರಲ್ಲಿ ಭ್ರಮೆಯನ್ನು ಬಿತ್ತುವ ಕೆಲಸ ಮಾಡುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ವಿಚಾರದಲ್ಲಿ ಒಬ್ಬ ಸಚಿವನಿಂದ ರಾಜೀನಾಮೆ ಕೊಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾನು ಸಾಚಾ ಎಂದು ಹೇಳುತ್ತಿದ್ದಾರೆ. ಮಾನ ಮರ್ಯಾದೆ ಇದ್ದರೆ ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಬಿಜೆಪಿ ಹಾಗೂ ಮೈತ್ರಿ ಪಕ್ಷಗಳಿಗೆ ಶೇ.56 ರಷ್ಟು ಮತ ಜನ ನೀಡಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಸೋತ ತಕ್ಷಣ ಸಿದ್ದರಾಮಯ್ಯ ಬೆಲೆ ಏರಿಕೆ ಮಾಡಿದ್ದಾರೆ. ಜನರ ವಿರುದ್ಧ ದ್ವೇಷದ ನಿರ್ಧಾರ ತೆಗೆದುಕೊಂಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಚಿವರು ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳದ್ದೂ ಜವಾಬ್ದಾರಿ ಇದೆ ಎಂದರು.

RELATED ARTICLES
- Advertisment -
Google search engine

Most Popular