ರಾಮನಗರ: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿ ಉಪಮುಖ್ಯಮಂತ್ರಿ ಡಿ.ಕ ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಇದೇ ಜೂ. 24 ಹಾಗೂ 26ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ.
ಜೂ. 24ರ ಸೋಮವಾರ ಬೆಳಿಗ್ಗೆ 10.30 ಕ್ಕ ಹುಣಸನಹಳ್ಳಿಯ ಬಿಸಿಲಮ್ಮನ ದೇವಸ್ಥಾನ ಆವರಣದಲ್ಲಿ ಹಾಗೂ ಮದ್ಯಾಹ್ನ 3 ಗಂಟೆಗೆ ಅಕ್ಕೂರು ಹೊಸಹಳ್ಳಿಯ ಹೆಚ್.ಕೆ.ವೀರಣ್ಣ ಗೌಡ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ. ಜೂ. 26 ರ ಬುಧವಾರ ಬೆಳಿಗ್ಗೆ 10.30ಕ್ಕೆ ಬೇವೂರಿನಲ್ಲಿ ಹಾಗೂ ಮಾಧ್ಯಾಹ್ನ 3 ಗಂಟೆಗೆ ಅಬ್ಬೂರಿನಲ್ಲಿ ಏರ್ಪಡಿಸಲಾಗಿದೆ.
ರಾಮನಗರ ಜಿಲ್ಲೆಗೆ ಸಂಬಂಧಿಸಿದಂತೆ ಸಾರ್ವಜನಿಕರು, ನಾಗರಿಕರುಗಳು ಎದುರಿಸುತ್ತಿರುವ ಹಲವಾರು ರೀತಿಯ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸ್ವೀಕರಿಸಲಾಗುವುದು, ಅದರಂತೆ ರಾಮನಗರ ಜಿಲ್ಲೆಯ ಸಾರ್ವಜನಿಕರು ಖುದ್ದು ಹಾಜರಾಗಿ ಅರ್ಜಿ, ಮನವಿಗಳನ್ನು ನೀಡುವಂತೆ ರಾಮನಗರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.