Sunday, April 20, 2025
Google search engine

Homeರಾಜ್ಯಮಾಯಾವತಿ ಸೋದರಳಿಯ ಆಕಾಶ್ ಆನಂದ್ ಮತ್ತೆ ಉತ್ತರಾಧಿಕಾರಿಯಾಗಿ ಆಯ್ಕೆ

ಮಾಯಾವತಿ ಸೋದರಳಿಯ ಆಕಾಶ್ ಆನಂದ್ ಮತ್ತೆ ಉತ್ತರಾಧಿಕಾರಿಯಾಗಿ ಆಯ್ಕೆ

ನವದೆಹಲಿ: ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಸೋದರಳಿಯ ಆಕಾಶ್ ಆನಂದ್ ಅವರನ್ನು ಮತ್ತೆ ತಮ್ಮ ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಿದ್ದಾರೆ.

ಲೋಕಸಭೆ ಚುನಾವಣೆಯ ಸಮಯದಲ್ಲೇ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್(೨೮) ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಮತ್ತು ತಮ್ಮ ಉತ್ತರಾಧಿಕಾರಿ ಸ್ಥಾನದಿಂದ ತೆಗೆದುಹಾಕಿದ್ದರು. ಇದೀಗ ಮತ್ತೆ ತಮ್ಮ ಉತ್ತರಾಧಿಕಾರಿ ಸ್ಥಾನಕ್ಕೆ ಆಕಾಶ್ ಆನಂದ್ ಅವರನ್ನು ಆಯ್ಕೆ ಮಾಡಿರುತ್ತಾರೆ.

ಇದೀಗ ಉತ್ತರಾಖಂಡ ಹಾಗೂ ಪಂಜಾಬ್‌ನಲ್ಲಿ ವಿಧಾನಸಭಾ ಉಪ ಚುನಾವಣೆಗಳು ನಡೆಯಲಿದೆ. ಈ ಹಿನ್ನೆಲೆ ಆಕಾಶ್ ಆನಂದ್ ಅವರನ್ನು ಮತ್ತೆ ರಾಜಕೀಯದಲ್ಲಿ ಸಕ್ರಿಯವಾಗಿಸಲು ಸಿದ್ಧತೆ ನಡೆಸಲಾಗಿದೆ. ಹೀಗಾಗಿ ಎರಡೂ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಉಪಚುನಾವಣೆಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಾಯಾವತಿ ಅವರ ಬಳಿಕ ಆಕಾಶ್ ಹೆಸರು ಎರಡನೇ ಸ್ಥಾನದಲ್ಲಿದೆ. ಬಿಜೆಪಿಯನ್ನು ಆಕಾಶ್ ಅವರು ತಾಲಿಬಾನ್‌ಗೆ ಹೋಲಿಸಿದ ಕೆಲವು ದಿನಗಳ ಬಳಿಕ ಅವರನ್ನು ಎರಡು ಪ್ರಮುಖ ಹುದ್ದೆಗಳಿಂದ ವಜಾಗೊಳಿಸಲಾಗಿತ್ತು. ಜೊತೆಗೆ ಆಕಾಶ್ ಇನ್ನೂ ಅಪ್ರಬುದ್ಧ ಎಂದು ಮಾಹಾವತಿ ತಿಳಿಸಿದ್ದರು. ಈ ಮೂಲಕ ಮಾಯಾವತಿ ಅವರು ಜನರಲ್ಲಿ ಹಾಗೂ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದರು.

RELATED ARTICLES
- Advertisment -
Google search engine

Most Popular