ಚಾಮರಾಜನಗರ: ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ನಾಳೆ ಜೂನ್ 24ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುವರು. ಬೆಳಿಗ್ಗೆ 11 ರಿಂದ 11.30 ಗಂಟೆಯವರೆಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಸಭೆ ನಡೆಸುವರು. ಬೆಳಿಗ್ಗೆ 11.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆ.ಡಿ.ಪಿ ಸಭಾಂಗಣದಲ್ಲಿ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ರಿಂದ 4 ಗಂಟೆಯವರೆಗೆ ಜಿಲ್ಲಾಡಳಿತ ಭವನದಲ್ಲಿ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಸಭೆ ನಡೆಸುವರು. ಸಂಜೆ 4 ರಿಂದ 5 ಗಂಟೆಯವರೆಗೆ ಸ್ಥಳೀಯ ಸಂಸ್ಥೆಗಳ ಸಭೆ ನಡೆಸುವರು. ಸಂಜೆ 5.30 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.