ಮದ್ದೂರು: ತಾಲೂಕಿನ ಗೆಜ್ಜಲಗೆರೆ ಗ್ರಾಮದ ಎಲ್ಲೆಯಲ್ಲಿ ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಜಮೀನನ್ನು ತಾಲೂಕು ಆಡಳಿತ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು, ತಹಶೀಲ್ದಾರ್ ಸೋಮಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ತೆರವು ಮಾಡಿದ್ದಾರೆ.
ತಾಲೂಕಿನ ಗೆಜ್ಜಲಗೆರೆ ಎಲ್ಲೆಯ ಸರ್ವೇ ನಂಬರ್ 139ರಲ್ಲಿ 4 ಎಕರೆ 15 ಕುಂಟೆ ಸರ್ಕಾರಿ ಜಮೀನನ್ನು ಗ್ರಾಮದ ಪುಟ್ಟತಾಯಮ್ಮ ,ಸಿದ್ದಪ್ಪ ಎಂಬುವವರು ಒತ್ತುವರಿ ಮಾಡಿಕೊಂಡು ಬೇಸಾಯ ಮಾಡುತ್ತಿದ್ದ ಸಂಬಂಧ ಗ್ರಾಮಸ್ಥರು ಮಂಡ್ಯ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮತ್ತು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿ ಪ್ರಕರಣ ದಾಖಲಿಸಿದರು.
ಈ ಸಂಬಂಧ ಉಪವಿಭಾಗ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಯವರು ತಾಸಹಶೀಲ್ದಾರ್ ಕೆ.ಎಸ್ ಸೋಮಶೇಖರ್ ಅವರಿಗೆ ಒತ್ತುವರಿ ತೆರವುಗೊಳಿಸಿ ಸರ್ಕಾರಿ ಕಟ್ಟಿಗೆಯನ್ನು ಸಾರ್ವಜನಿಕರ ಉಪಯೋಗಕ್ಕೆ ಬಳಕೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.

ಕಾರ್ಯಾಚರಣೆ ಕೈಗೊಂಡ ತಾಹಶೀಲ್ದಾರ್ ಕೆ.ಎಸ್ ಸೋಮಶೇಖರ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ಕಾರ್ಯ ಕೈಗೊಂಡು ಸರ್ಕಾರಿ ಕಟ್ಟೆಯನ್ನು ಗುರುತಿಸಿ ಒತ್ತುವರಿಯನ್ನು ತೆರವುಗೊಳಿಸಿದರು.
ಬಳಿಕ ತಹಶೀಲ್ದಾರ್ ಸೋಮಶೇಖರ್ ಜಿಲ್ಲಾಧಿಕಾರಿ ಮತ್ತು ಸ್ಥಳೀಯ ಶಾಸಕರ ಸೂಚನೆ ಮೇರೆಗೆ ತಾಲೂಕಿನಾದ್ಯಂತ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ ಕಾರ್ಯಚರಣೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ವೇಳೆ ಕಂದಾಯ ನಿರೀಕ್ಷಕ ಜಗದೀಶ್, ಗ್ರಾಮ ಲೆಕ್ಕಾಧಿಕಾರಿ ಹರೀಶ್, ಪಿಡಿಒ ವೆಂಕಟಯ್ಯ, ಸರ್ವಿಯರ್ ಶ್ರೀಕಂಠೇಶ್ವರ ಸ್ವಾಮಿ ಹಾಜರಿದ್ದರು.
