Saturday, April 19, 2025
Google search engine

Homeಅಪರಾಧವಾಲ್ಮೀಕಿ ನಿಗಮದ ಅವ್ಯವಹಾರ: ತನಿಖೆ ಆರಂಭಿಸಿದ ಇಡಿ

ವಾಲ್ಮೀಕಿ ನಿಗಮದ ಅವ್ಯವಹಾರ: ತನಿಖೆ ಆರಂಭಿಸಿದ ಇಡಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣವನಗನು ಜಾರಿ ನಿರ್ದೇಶನಾಲಯ ತನಿಖೆಯನ್ನು ಪ್ರತ್ಯೇಕವಾಗಿ ಆರಂಭಿಸಿದೆ.

ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳನ್ನು ಇಡಿ ವಿಚಾರಣೆ ನಡೆಸಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ್ ಮತ್ತು ಪರುಶರಾಮ್ ಇಬ್ಬರನ್ನು ವಿಚಾರಣೆ ನಡಿಸಿ ಹೇಳಿಕೆ ದಾಖಲಿಸಿಕೊಂಡಿದೆ.

ಮತ್ತೊಂದೆಡೆ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಕೂಡ ತನ್ನದೇ ಆಯಾಮದಲ್ಲಿ ತನಿಖೆ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು ೯ ಜನ ಆರೋಪಿಗಳನ್ನ ಬಂಧಿಸಲಾಗಿದೆ. ನಿಗಮದಿಂದ ಒಟ್ಟು ೯೪ ಕೋಟಿ ೭೩ ಲಕ್ಷ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದ್ದು, ಈ ಪೈಕಿ ಎಸ್‌ಐಟಿ ಅಧಿಕಾರಿಗಳು ೧೪.೫ ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular