ನವದೆಹಲಿ: ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಹಾಗೂ ವಿ.ಸೋಮಣ್ಣ ನವರು ಕನ್ನಡದಲ್ಲಿಯೇ ಪ್ರಮಾಣವಚನ ಮಾಡಿ ಎಲ್ಲರ ಗಮನ ಸೆಳೆದರು.
ಮೂವರು ನೂತನ ಸಂಸದರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲ ಬಾರಿಗೆ ಸಂಸತ್ ಪ್ರವೇಶಿಸುತ್ತಿರುವ ಸೋಮಣ್ಣ ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಸಂಸತ್ ಭವನ್ನು ಪ್ರವೇಶ ಮಾಡಿದರು. ಅಂದ ಹಾಗೇ ಹೆಚ್.ಡಿ ಕುಮಾರಸ್ವಾಮಿಯವರಿಗೆ (ಮಂಡ್ಯ) ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ, ಪ್ರಹ್ಲಾದ್ ಜೋಶಿಯವರಿಗೆ (ಧಾರವಾಡ) ಕಲ್ಲಿದ್ದಲು ಮತ್ತು ಗಣಿ ಹಾಗೂ ರೈಲ್ವೇ ಇಲಾಖೆಯನ್ನು ವಿ.ಸೋಮಣ್ಣ (ತುಮಕೂರು) ಅವರಿಗೆ ನೀಡಲಾಗಿದೆ. ಶೋಭಾ ಕರಂದ್ಲಾಜೆಯವರು (ಬೆಂಗಳೂರು ಉತ್ತರ) ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾಗಿದ್ದಾರೆ.