ಕೋಲಾರ : ರಾಜ್ಯದಲ್ಲಿ ಮತ್ತೊಂದು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮಿಣಜೇನಹಳ್ಳಿಯಲ್ಲಿ ನಡೆದಿದೆ.
ಮುಳಬಾಗಿಲು ತಾಲೂಕಿನ ಮಿಣಜೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವನ್ನಪ್ಪಿದ್ದು, ಏಳು ಮಂದಿ ಅಸ್ವಸ್ತರಾಗಿರುವ ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿ ಮೃತಪಟ್ಟವರನ್ನು ಮಿಣಜೇನಹಳ್ಳಿಯ ವೆಂಕಟರಮಣ್ಣಪ್ಪ ಎಂದು ಗುರುತಿಸಲಾಗಿದ್ದು, ಅಸ್ವಸ್ಥಗೊಂಡ ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.