Tuesday, April 22, 2025
Google search engine

Homeರಾಜ್ಯಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮತಿ: ಎಲ್‌ಕೆಜಿ, ಯುಕೆಜಿ ಆರಂಭಿಸಲು ಸೂಚನೆ

ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮತಿ: ಎಲ್‌ಕೆಜಿ, ಯುಕೆಜಿ ಆರಂಭಿಸಲು ಸೂಚನೆ

ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು.

ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಯ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು.

ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣದ ಸಚಿವ ಮಧು ಬಂಗಾರಪ್ಪ, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular