Monday, April 21, 2025
Google search engine

Homeರಾಜ್ಯಸುದ್ದಿಜಾಲಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಚಾಮರಾಜನಗರ: ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಮಹತ್ತರ ಐದು ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ ಯೋಜನೆ, ಯುವನಿಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.

ಐದು ಗ್ಯಾರಂಟಿ ಯೋಜನೆಗಳು ಜನತೆಗೆ ಮುಟ್ಟಿಸುವ ನಿಟ್ಟಿನಲ್ಲಿ ವಿವಿಧ ಹಂತಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಕಾರ್ಯನಿರ್ವಹಿಸಲಿದೆ. ಜಿಲ್ಲೆಗೆ ನೇಮಕವಾಗಿರುವ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಇಂದು ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಗಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಕಾರ್ಯೋನ್ಮುಖರಾಗಲಿದ್ದಾರೆ ಎಂದರು.

ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಮಾತನಾಡಿ ಸ್ವಾವಲಂಬಿ, ಸ್ವಾಭಿಮಾನ ಬದುಕು ಕಟ್ಟಿಕೊಳ್ಳಲು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಅನುಷ್ಠಾನ ಹೇಗೆ ಸಾಗಿದೆ. ಏನಾದರು ಸಮಸ್ಯೆಗಳು ಇದೆಯೇ ಎಂಬ ಬಗ್ಗೆ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರು ಫಲಾನುಭವಿಗಳಿಗೆ ತೆರಳಿ ತಿಳಿಯಬೇಕು ಎಂದರು.

ಬದುಕಿನಲ್ಲಿ ಭರವಸೆ, ಆತ್ಮಸ್ತೈರ್ಯ ತುಂಬುವ ಕೆಲಸ ಮಾಡಬೇಕು. ಮಾಸಿಕ ಆದಾಯ ಇಲ್ಲದ ಕುಟುಂಬಗಳಿಗೆ ನೆರವಾಗುವ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ದಿಸೆಯಲ್ಲಿ ಪ್ರಾಧಿಕಾರ ಮುಂದಾಗಬೇಕು. ಸರ್ಕಾರದ ಉದ್ದೇಶ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ತಿಳಿಸಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಹೆಚ್.ವಿ. ಚಂದ್ರು ಅವರು ಮಾತನಾಡಿ ಆರ್ಥಿಕವಾಗಿ ಹಾಗೂ ಹಿಂದುಳಿದ ಜನರ ಸಬಲೀಕರಣ ಮಾಡುವ ಉದ್ದೇಶ ಸರ್ಕಾರದ ಗ್ಯಾರಂಟಿ ಯೋಜನೆಗಳದ್ದಾಗಿದೆ. ಇದರ ಮೇಲುಸ್ತುವಾರಿಗಾಗಿ ಅನುಷ್ಠಾನ ಸಮಿತಿ ತರಲಾಗಿದೆ. ಸಚಿವರು, ಶಾಸಕರು, ಅಧಿಕಾರಿಗಳ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ದುಡಿಯುವುದಾಗಿ ನುಡಿದರು.

ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯಲ್ಲಿ ಯೋಜನೆಗಳಲ್ಲಿ ಆಗಿರುವ ಪ್ರಗತಿ ಮಾಹಿತಿಯನ್ನು ಸಭೆಗೆ ವಿವರಿಸಿದರು.

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್, ಹೆಚ್.ಎಂ, ಗಣೇಶ್ ಪ್ರಸಾದ್, ಸಿ.ಎನ್. ಮಂಜೇಗೌಡ, ಡಾ. ಡಿ. ತಿಮ್ಮಯ್ಯ, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಎಸ್. ಜಯಣ್ಣ, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಸೋಮೇಶ್ವರ, ಸಿದ್ದರಾಜು, ಎಸ್. ಪ್ರಭುಪ್ರಸಾದ್, ಎಸ್.ಆರ್.ಎಸ್. ರಾಜಶೇಖರ, ಕೆ.ಎನ್. ಪ್ರದೀಪ್ ಕುಮಾರ್, ಸದಸ್ಯರಾದ ಆರ್. ಉಮೇಶ್, ಶಿವಮೂರ್ತಿ, ಪಿ.ಪಿ. ನಾಗರಾಜಮೂರ್ತಿ, ಕೆ.ಬಿ. ಚಿನ್ನಸ್ವಾಮಿ, ಉಮಾಪತಿ, ಎಂ.ಪ್ರದೀಪ್, ರವಿಕುಮಾರ್, ರಾಚಪ್ಪ, ದಯಾನಿಧಿ, ರವಿ, ಅಕ್ಬರ್ ಪಾಷ, ರಾಜೇಂದ್ರ. ಆರ್, ಹೆಚ್.ಎನ್. ಜಯರಾಜು, ಭಾಗ್ಯ, ದೇವರಾಜು. ಎಂ ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular