ನವದೆಹಲಿ: ದೆಹಲಿಗೆ ಸಮಪಾಲಿನ ನೀರು ಬಿಡುವಂತೆ ಆಗ್ರಹಿಸಿ ಹರಿಯಾಣ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಜಲ ಸಚಿವೆ ಅತಿಶಿ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಂಗಳವಾರ ಬೆಳಗಿನ ಜಾವ ಅತಿಶಿ ಆರೋಗ್ಯ ಹದಗೆಟ್ಟಿದ್ದು ಲೋಕ್ ನಾಯಕ್ ಜಯ ಪ್ರಕಾಶ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೀಘ್ರ ಚೇತರಿಕೆಗಾಗಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಎಪಿ ತಿಳಿಸಿದೆ. ಅತಿಶಿ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಎಎಪಿ, ಅವರು ಕಳೆದ ಐದು ದಿನಗಳಿಂದ ಆಹಾರ ಸೇವಿಸಲಿಲ್ಲ. ಅವರ ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವು ತೀವ್ರವಾಗಿ ಕುಸಿದಿದೆ ಎಂದು ತಿಳಿಸಿದೆ.