Saturday, April 19, 2025
Google search engine

Homeರಾಜ್ಯನಂದಿನಿ ಹಾಲಿನ ದರ ಹೆಚ್ಚಿಸಿದ ಕೆಎಂಎಫ್

ನಂದಿನಿ ಹಾಲಿನ ದರ ಹೆಚ್ಚಿಸಿದ ಕೆಎಂಎಫ್

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ. ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು. ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್ಗೆ ೫೦ ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ ೪೨ ರೂಪಾಯಿ ಇರುವ ದರವನ್ನು ೨ ರೂಪಾಯಿ ಹೆಚ್ಚಳ ಮಾಡಲಾಗುವುದು. ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ತಿಳಿಸಿದರು.

ಕೆಎಂಎಫ್ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ. ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ ೨೨ರಿಂದ ೨೪ ರೂ.ಗೆ ಏರಿಕೆಯಾಗಲಿದೆ. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ ೫೨ ರುಪಾಯಿ ಇದೆ. ಗುಜರಾತ್ನಲ್ಲಿ ಅಮುಲ್ ಒಂದು ಲೀಟರ್ಗೆ ೫೬ ರೂ. ಮಹಾರಾಷ್ಟ್ರದಲ್ಲಿ ೫೬ ರೂ. ದೆಹಲಿ ಮದರ್ ಡೈರಿಯ ಹಾಲಿನ ಬೆಲೆ ೫೪ ರೂ. ಇದೆ ಎಂದು ಎಂದು ಭೀಮಾನಾಯ್ಕ್ ಹೇಳಿದರು.

RELATED ARTICLES
- Advertisment -
Google search engine

Most Popular