ಮಂಡ್ಯ: ಅಂತರಾಷ್ಟ್ರೀಯ ಮಾದಕ ವಸ್ತು ಸೇವನೆ ವಿರೋಧಿ ದಿನ ಹಿನ್ನಲೆ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜನಜಾಗೃತಿ ಜಾಥಾವನ್ನು ಏರ್ಪಡಿಸಲಾಗಿದೆ.
ಮಂಡ್ಯದ ಸಂಜಯ ವೃತ್ತದಿಂದ ಜಾಗೃತಿ ಜಾಥಾಗೆ ಎಸ್ಪಿ ಎನ್.ಯತೀಶ್ ಚಾಲನೆ ನೀಡಿದ್ದಾರೆ.
ಇದೇ ವೇಳೆ ಮಾದಕವಸ್ತು ದುರುಪಯೋಗದ ಬಗ್ಗೆ ಪೊಲೀಸ್ ಇಲಾಖೆ ಜಾಗೃತಿ ಮೂಡಿಸಿದ್ದಾರೆ. ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ ಸಾಗಿತು.
ಇದೇ ವೇಳೆ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ.