ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಮುಂಜಾನೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ನಿನ್ನೆ ರಾತ್ರಿಯಿಂದಲೇ ಸುರಿಯುತ್ತಿರುವ ಮಳೆ ಇಂದೂ ಕೂಡಾ ಮುಂದುವರಿಯಿತು.
ಮಂಗಳೂರು ನಗರದಲ್ಲಿ ಮಳೆಯ ನೀರು ಹರಿದುಹೋಗಲು ಸಾಧ್ಯವಾಗದೆ ರಸ್ತೆಗಳೆಲ್ಲಾ ಕೆರೆಯಂತಾಗಿದೆ. ಪರಿಣಾಮ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಹಳ್ಳ, ಕೊಳ್ಳಗಳಲ್ಲಿ ಅಪಾಯದ ಮಟ್ಟದಲ್ಲಿ ನೀರು ಹರಿಯುತ್ತಿದೆ.
ಧಾರಾಕಾರವಾಗಿ ಮಳೆಯ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ. ಜೊತೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.