Saturday, April 19, 2025
Google search engine

Homeಕ್ರೀಡೆಐಸಿಸಿ ಟ್ವೆಂಟಿ-20 ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಬ್ಯಾಟರ್ ಸೂರ್ಯಕುಮಾರ್ ಯಾದವ್‌ಗೆ ನಂ.1 ಸ್ಥಾನ

ಐಸಿಸಿ ಟ್ವೆಂಟಿ-20 ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಬ್ಯಾಟರ್ ಸೂರ್ಯಕುಮಾರ್ ಯಾದವ್‌ಗೆ ನಂ.1 ಸ್ಥಾನ

ಬೆಂಗಳೂರು: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ನೂತನ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ ಬ್ಯಾಟಿಂಗ್ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಇದರೊಂದಿಗೆ ಭಾರತದ ಬ್ಯಾಟರ್ ಸೂರ್ಯಕುಮಾರ್ ಯಾದವ್‌ಗೆ ನಂ.1 ಸ್ಥಾನ ನಷ್ಟವಾಗಿದೆ. ಟ್ರಾವಿಸ್‌ಗೆ ಅಗ್ರಸ್ಥಾನ ಬಿಟ್ಟುಕೊಟ್ಟಿರುವ ಸೂರ್ಯ, ಒಂದು ಸ್ಥಾನ ಕುಸಿತ ಕಂಡು 2ನೇ ಸ್ಥಾನಕ್ಕೆ ತಲುಪಿದ್ದಾರೆ.

2023 ಡಿಸೆಂಬರ್‌ನಿಂದ ಸೂರ್ಯಕುಮಾರ್ ಅಗ್ರಸ್ಥಾನ ಕಾಯ್ದುಕೊಂಡಿದ್ದರು. ಆದರೆ ಈಗ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

ಮತ್ತೊಂದೆಡೆ ಪ್ರಸಕ್ತ ಸಾಗುತ್ತಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ವಿರುದ್ಧ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಟ್ರಾವಿಸ್ ಹೆಡ್, ನಾಲ್ಕು ಸ್ಥಾನಗಳ ಬಡ್ತಿ ಪಡೆದಿದ್ದಾರೆ.

ಅಗ್ರ 10ರ ಪಟ್ಟಿಯಲ್ಲಿ ಭಾರತದ ಯಶಸ್ವಿ ಜೈಸ್ವಾಲ್ 7ನೇ ಸ್ಥಾನದಲ್ಲಿದ್ದಾರೆ.

ಐಸಿಸಿ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ ರ್‍ಯಾಂಕಿಂಗ್‌ ಪಟ್ಟಿ:

1. ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ): 844

2. ಸೂರ್ಯಕುಮಾರ್ ಯಾದವ್ (ಭಾರತ): 842

3. ಫಿಲ್ ಸಾಲ್ಟ್ (ಇಂಗ್ಲೆಂಡ್): 816

4. ಬಾಬರ್ ಆಜಂ (ಪಾಕಿಸ್ತಾನ): 755

5. ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ): 746

6. ಜೋಸ್ ಬಟ್ಲರ್ (ಇಂಗ್ಲೆಂಡ್): 716

7. ಯಶಸ್ವಿ ಜೈಸ್ವಾಲ್ (ಭಾರತ): 672

8. ಏಡೆನ್ ಮಾರ್ಕರಮ್ (ದ.ಆಫ್ರಿಕಾ): 659

9. ಬ್ರಂಡನ್ ಕಿಂಗ್ (ವೆಸ್ಟ್ ಇಂಡೀಸ್): 656

10. ಜಾನ್ಸನ್ ಚಾರ್ಲ್ಸ್ (ವೆಸ್ಟ್ ಇಂಡೀಸ್): 655

RELATED ARTICLES
- Advertisment -
Google search engine

Most Popular