Saturday, April 19, 2025
Google search engine

Homeರಾಜಕೀಯಷಡ್ಯಂತ್ರ ಮಾಡಿದರೆ ನಾಯಕರಾಗಿ ಹೊರ ಹೊಮ್ಮಲ್ಲ: ಬಿ ವೈ ವಿಜಯೇಂದ್ರ

ಷಡ್ಯಂತ್ರ ಮಾಡಿದರೆ ನಾಯಕರಾಗಿ ಹೊರ ಹೊಮ್ಮಲ್ಲ: ಬಿ ವೈ ವಿಜಯೇಂದ್ರ

ನವದೆಹಲಿ: ಕುತಂತ್ರ ಹಾಗೂ ಷಡ್ಯಂತ್ರ ಮಾಡಿದರೆ ನಾಯಕರಾಗಿ ಹೊರ ಹೊಮ್ಮಲ್ಲ. ಸಮುದಾಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಕಾಂಗ್ರೆಸ್ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಿಂದ ಮಾಜಿ ಪ್ರಧಾನಿ ಹೆಚ್ ​​ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೆಸರು ಕೈಬಿಡುವ ವಿಚಾರವಾಗಿ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಲೋಕಸಭೆ ಚುನಾವಣೆಯಲ್ಲಿ ಯಶಸ್ವಿಯಾಗಿದ್ದೇವೆ. ಕಾಂಗ್ರೆಸ್ ಬಗ್ಗೆ ನಮಗೆ ಅನುಕಂಪ ಇಲ್ಲ. ಆದರೆ ರಾಜ್ಯದ ಜನರ ಬಗ್ಗೆ ಅನುಕಂಪ ಇದೆ ಎಂದರು.

ಕಾಂಗ್ರೆಸ್​ನಲ್ಲಿ ಹೆಚ್ಚುವರಿ ಡಿಸಿಎಂ ಸ್ಥಾನಕ್ಕೆ ಬೇಡಿಕೆ ಸೃಷ್ಟಿಯಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಡಿಕೆ ಶಿವಕುಮಾರ್​ ಸೊಕ್ಕು ಮುರಿಯಬೇಕು ಎಂಬ ಪ್ರಯತ್ನ ನಡೆಯುತ್ತಿದೆ. ಅವರನ್ನು ಕಟ್ಟಿಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಅವರ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಹಾಗಾಗಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಗೆ ಒತ್ತಡ ಹಾಕುತ್ತಿದ್ದಾರೆ. ನನಗೆ ಭರವಸೆಯಿದೆ, ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಶಸ್ವಿಯಾಗುತ್ತಾರೆ. ಹೈಕಮಾಂಡ್ ಮನವೊಲಿಸಿ ಡಿಸಿಎಂ ಹುದ್ದೆ ಸೃಷ್ಟಿ ಮಾಡುತ್ತಾರೆ ಎಂದರು.

ಕರ್ನಾಟಕದಲ್ಲಿ ಬೆಲೆ ಏರಿಕೆ ಪರ್ವ

ರಾಜ್ಯದಲ್ಲಿ ಬೆಲೆ ಏರಿಕೆಯ ಪರ್ವ ನಡೆಯುತ್ತಿದೆ. ರಾಜ್ಯದ ಜನರಿಗೆ ಬರೆ ಎಳೆಯುವ ಕೆಲಸ ಆಗುತ್ತಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು. ಕಳೆದ ವಾರ ಸಿಎಂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ. ನಾವು ಪ್ರಶ್ನೆ ಮಾಡಿದರೆ ಉದ್ಧಟತನದ ಉತ್ತರ ಹೇಳುತ್ತಾರೆ. ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಸಿಎಂ ಸಿದ್ದರಾಮಯ್ಯ ಯಾಕಿಷ್ಟು ಕಟುವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.

ಕಾಂಗ್ರೆಸ್ಸಿಗರು ಸಾಕಷ್ಟು ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಸಿಎಂ ಸಿದ್ದರಾಮಯ್ಯರನ್ನು ನೋಡಿದರೆ ಅಯ್ಯೋ ಎನ್ನಿಸುತ್ತಿದೆ. ಆಡಳಿತ ಪಕ್ಷದ ಶಾಸಕರು ತಲೆ ಎತ್ತಿ ಓಡಾಡಲು ಆಗುತ್ತಿಲ್ಲ. ಅಭಿವೃದ್ಧಿಗೆ ಹಣ ಕೊಡಿ ಎಂದು ಸಿಎಂ ಮೇಲೆ ಒತ್ತಡ ಹಾಕ್ತಿದ್ದಾರೆ. ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಆಗುತ್ತಿಲ್ಲ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.

RELATED ARTICLES
- Advertisment -
Google search engine

Most Popular