ಮಡಿಕೇರಿ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕುಮಾರ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯಲ್ಲಿ ಹೆಚ್ಚುವರಿ ಪ್ರಭಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿನ್ನಸ್ವಾಮಿ ಅವರು ನಗರದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿದೇಶಕರ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು.
ಕುಮಾರ ಅವರು ಈ ಹಿಂದೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಬೆಂಗಳೂರಿನ ನಾಟಕ ಅಕಾಡೆಮಿಯಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.