ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆಗಳಿಗೆ ಇದೇ 27ರಂದು ಗುರುವಾರ ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆಯಿಂದ ಜೂ.27 ರಂದು ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.