Sunday, April 20, 2025
Google search engine

Homeಸ್ಥಳೀಯಕೆಂಪೇಗೌಡ ಒಂದೇ ಸಮುದಾಯಕ್ಕೆ ಸೀಮೀತವಾದವರಲ್ಲ- ಎಲ್ ನಾಗೇಂದ್ರ ಅಭಿಮತ

ಕೆಂಪೇಗೌಡ ಒಂದೇ ಸಮುದಾಯಕ್ಕೆ ಸೀಮೀತವಾದವರಲ್ಲ- ಎಲ್ ನಾಗೇಂದ್ರ ಅಭಿಮತ

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಜೀವಧಾರ ರಕ್ತನಿಧಿ ಕೇಂದ್ರದ ವತಿಯಿಂದ ಹೋಳಿಗೆ ವಿತರಣೆ

ಮೈಸೂರು: ಜೀವಧಾರ ರಕ್ತನಿಧಿ ಕೇಂದ್ರ ಹಾಗೂ ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ ಅರಮನೆಯ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ನಾಡಪ್ರಭು ಕೆಂಪೇಗೌಡ ರವರ 515 ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಕೆಂಪೇಗೌಡ ಜಯಂತಿಯ ಮೆರವಣಿಗೆಯಲ್ಲಿ 2,000 ಹೋಳಿಗೆಯನ್ನು ವಿತರಿಸಿ ಮಾತನಾಡಿದ ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಕೆಂಪೇಗೌಡರು ಒಕ್ಕಲಿಗ ಸಮುದಾಯದ ಪ್ರಭುಗಳಾಗಿದ್ದರೂ ಸಹ ಒಂದೇ ಸಮುದಾಯಕ್ಕೆ ಸೀಮೀತವಾದವರಲ್ಲ ಎಂಬುದಕ್ಕೆ ಅವರು ಕಟ್ಟಿದ ಬೆಂಗಳೂರು ನಗರವೇ ಸಾಕ್ಷಿ. ಪ್ರತಿಯೊಂದು ಸಮುದಾಯದ ಜನರಿಗೂ ಒಂದೊಂದು ಕೇರಿಯನ್ನು ಸಮುದಾಯದ ಹೆಸರಿನಲ್ಲೇ ಕಟ್ಟಿಕೊಟಿದ್ದಾರೆ’.‘ಕೆಂಪೇಗೌಡ ಅವರು ನಡೆಸಿದ ರಾಜಾಡಳಿತವೂ ಇತರ ರಾಜರಿಗೆ ಮಾದರಿಯಾಗಿದ್ದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಇಂತಹ ಮಹಾನ್ ನಾಯಕರು ನೆಲೆಸಿದ ನಾಡಿನಲ್ಲಿ ಬದುಕುತ್ತಿರುವ ನಾವುಗಳೇ ಪುಣ್ಯವಂತರು’ ಎಂದು ಸ್ಮರಿಸಿದರು.

ಶಾಸಕರಾದ ಜಿ ಟಿ ದೇವೇಗೌಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮರಿಗೌಡ, ಬಿಜೆಪಿ ನಗರ ಅಧ್ಯಕ್ಷ ಎಲ್ ನಾಗೇಂದ್ರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಜಯಕುಮಾರ್, ಮೂಡ ಮಾಜಿ ಅಧ್ಯಕ್ಷರಾದ ಯಶಸ್ವಿ ಸೋಮಶೇಖರ್, ಹೇಮಂತ್ ಕುಮಾರ್ ಗೌಡ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್,
ಇಂದಿರಾ ಗಾಂಧಿ ಬ್ಲಾಕ್ ಅಧ್ಯಕ್ಷರಾದ ಮಂಚೇಗೌಡನ ಕೊಪ್ಪಲು ರವಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ಒಕ್ಕಲಿಗರ ಸಂಘದ ಕಾರ್ಯದರ್ಶಿ ಚೇತನ್ ಗೌಡ, ಆನಂದ್, ಸೂರಜ್, ಸದಾಶಿವ್, ಗಿರೀಶ್ ಗೌಡ , ಒಕ್ಕಲಿಗ ಸಂಘದ ನಿರ್ದೇಶಕರುಗಳು ಮುಖಂಡರು ಹಾಜರಿದ್ದರು.

RELATED ARTICLES
- Advertisment -
Google search engine

Most Popular